ADVERTISEMENT

ಬೆಳಗಾವಿ: ಹರೀಶ್‌ಕುಮಾರ್‌ ನೂತನ ಡಿ.ಸಿ.

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2021, 11:58 IST
Last Updated 22 ಮಾರ್ಚ್ 2021, 11:58 IST
ಬೆಳಗಾವಿಯ ನೂತನ ಜಿಲ್ಲಾಧಿಕಾರಿಯಾಗಿ ಸೋಮವಾರ ಅಧಿಕಾರ ವಹಿಸಿಕೊಂಡ ಡಾ.ಕೆ. ಹರೀಶ್‌ಕುಮಾರ್ ಅವರನ್ನು ನಿಕಟಪೂರ್ವ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಶುಭ ಕೋರಿದರು
ಬೆಳಗಾವಿಯ ನೂತನ ಜಿಲ್ಲಾಧಿಕಾರಿಯಾಗಿ ಸೋಮವಾರ ಅಧಿಕಾರ ವಹಿಸಿಕೊಂಡ ಡಾ.ಕೆ. ಹರೀಶ್‌ಕುಮಾರ್ ಅವರನ್ನು ನಿಕಟಪೂರ್ವ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಶುಭ ಕೋರಿದರು   

ಬೆಳಗಾವಿ: ಇಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಂ.ಜಿ. ಹಿರೇಮಠ ಅವರನ್ನು ಸೋಮವಾರ ವರ್ಗಾವಣೆ ಮಾಡಲಾಗಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಈ ಬದಲಾವಣೆ ನಡೆದಿದೆ. ಹಿರೇಮಠ ಅವರು ಇದೇ ಜಿಲ್ಲೆಯವರಾಗಿರುವುದರಿಂದ ವರ್ಗಾಯಿಸಲಾಗಿದೆ.

ನೂತನ ಜಿಲ್ಲಾಧಿಕಾರಿಯಾಗಿ ಡಾ.ಕೆ. ಹರೀಶ್‌ಕುಮಾರ್‌ ಸಂಜೆ ಅಧಿಕಾರ ವಹಿಸಿಕೊಂಡರು. ಇದಕ್ಕೆ ಮುನ್ನ ಅವರು, ಉದ್ಯೋಗ ಮತ್ತು ತರಬೇತಿ ಆಯುಕ್ತರಾಗಿದ್ದರು. ಅವರು ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ADVERTISEMENT

ಡಾ.ಎಸ್.ಬಿ. ಬೊಮ್ಮನಹಳ್ಳಿ ಅವರ ಸೇವಾ ನಿವೃತ್ತಿಯಿಂದ ತೆರವಾಗಿದ್ದ ಸ್ಥಾನಕ್ಕೆ ವರ್ಗವಾಗಿ ಬಂದಿದ್ದ ಹಿರೇಮಠ ಅವರು 2020ರ ಜೂನ್ 30ರಂದು ಅಧಿಕಾರ ಸ್ವೀಕರಿಸಿದ್ದರು. ವರ್ಷದಲ್ಲೇ ವರ್ಗವಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.