ADVERTISEMENT

ಹ್ಯಾಟ್ರಿಕ್ ಸಾಧನೆ: ಜನತೆಗೆ ಕೃತಜ್ಞತೆ ಸಲ್ಲಿಸಿದ ಜೊಲ್ಲೆ

​ಪ್ರಜಾವಾಣಿ ವಾರ್ತೆ
Published 14 ಮೇ 2023, 13:52 IST
Last Updated 14 ಮೇ 2023, 13:52 IST
ಛತ್ರಪತಿ ಸಂಭಾಜಿ ಮಹಾರಾಜರ ಜಯಂತಿ ಅಂಗವಾಗಿ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ನಿಪ್ಪಾಣಿಯ ಬಸ್ ನಿಲ್ದಾಣದ ಬಳಿಯ ಪ್ರತಿಮೆಗೆ ಪೂಜೆ ಸಲ್ಲಿಸಿದರು
ಛತ್ರಪತಿ ಸಂಭಾಜಿ ಮಹಾರಾಜರ ಜಯಂತಿ ಅಂಗವಾಗಿ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ನಿಪ್ಪಾಣಿಯ ಬಸ್ ನಿಲ್ದಾಣದ ಬಳಿಯ ಪ್ರತಿಮೆಗೆ ಪೂಜೆ ಸಲ್ಲಿಸಿದರು   

ನಿಪ್ಪಾಣಿ: ವಿಧಾನಸಭೆ ಚುನಾವಣೆಯಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಮತ್ತು ಸಂಸದ ಅಣ್ಣಾಸಾಹೇಬ ಜೊಲ್ಲೆ ಭಾನುವಾರ ನಗರದ ಮಹಾದೇವಗಲ್ಲಿಯ ಮಹಾದೇವ ಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ನಂತರ ಮಹಾತ್ಮ ಬಸವೇಶ್ವರ, ಛತ್ರಪತಿ ಶಿವಾಜಿ ಮಹಾರಾಜ, ಛತ್ರಪತಿ ಸಂಭಾಜಿ ಮಹಾರಾಜ, ರಾಣಿ ಕಿತ್ತೂರ ಚನ್ನಮ್ಮ, ಡಾ. ಬಾಬಾಸಾಹೇಬ ಅಂಬೇಡ್ಕರ್, ಮಹಾತ್ಮ ಗಾಂಧಿಯವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಗೆಲುವಿಗೆ ಕಾರಣಕರ್ತರಾದ ಕ್ಷೇತ್ರದ ಜನತೆಗೆ ಕೃತಜ್ಞತೆಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯ ಚೇರ್ಮನ್ ಸಹಕಾರ ರತ್ನ ಚಂದ್ರಕಾಂತ ಕೋಠಿವಾಲೆ, ಬಸವಜ್ಯೋತಿ ಯುಥ್ ಫೌಂಡೇಷನ್ ಅಧ್ಯಕ್ಷ ಬಸವಪ್ರಸಾದ ಜೊಲ್ಲೆ, ನಗರಸಭೆ ಅಧ್ಯಕ್ಷ ಜಯವಂತ ಭಾಟಲೆ, ಉಪಾಧ್ಯಕ್ಷೆ ನೀತಾ ಬಾಗಡೆ, ರಾಜೇಂದ್ರ ಗುಂದೇಶಾ, ಸದಸ್ಯರು, ಅಭಯ ಮಾನವಿ, ಪ್ರಣವ ಮಾನವಿ, ಮತ್ತಿತರರು ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.