ADVERTISEMENT

ಸವದತ್ತಿ ಯಲ್ಲಮ್ಮದೇವಿ ದರ್ಶನ ಪಡೆದ ದೇವೇಗೌಡ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2020, 14:26 IST
Last Updated 16 ಫೆಬ್ರುವರಿ 2020, 14:26 IST
ಸವದತ್ತಿ ಯಲ್ಲಮ್ಮನಗುಡ್ಡದಲ್ಲಿ ಯಲ್ಲಮ್ಮದೇವಿ ದರ್ಶನ ಪಡೆದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರನ್ನು ಭಾನುವಾರ ದೇವಸ್ಥಾನ ಸಮಿತಿಯವರು ಸನ್ಮಾನಿಸಿದರು
ಸವದತ್ತಿ ಯಲ್ಲಮ್ಮನಗುಡ್ಡದಲ್ಲಿ ಯಲ್ಲಮ್ಮದೇವಿ ದರ್ಶನ ಪಡೆದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರನ್ನು ಭಾನುವಾರ ದೇವಸ್ಥಾನ ಸಮಿತಿಯವರು ಸನ್ಮಾನಿಸಿದರು   

ಸವದತ್ತಿ: ಇಲ್ಲಿನ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಭಾನುವಾರ ಭೇಟಿ ನೀಡಿ, ರೇಣುಕಾ ಯಲ್ಲಮ್ಮದೇವಿ ದರ್ಶನ ಪಡೆದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಇದು ಐತಿಹಾಸಿಕ ಹಿನ್ನೆಲೆ ಹೊಂದಿರುವ ಪುಣ್ಯಕ್ಷೇತ್ರ. ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ದೇವಿ ದರ್ಶನಕ್ಕೆ ಬರುತ್ತಾರೆ. ಆದರೆ, ಕ್ಷೇತ್ರದಲ್ಲಿ ನೊಣ, ಸೊಳ್ಳೆಗಳ ಹಾವಳಿ ವಿಪರೀತವಾಗಿದೆ. ತ್ಯಾಜ್ಯ ನಿರ್ವಹಣೆ ಸರಿಯಾಗಿ ನಡೆಯುತ್ತಿಲ್ಲ. ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಸ್ವಚ್ಛತೆಗೆ ಒತ್ತು ನೀಡಬೇಕು. ಇಂತಹ ಪವಿತ್ರ ಕ್ಷೇತ್ರ ಸ್ವಚ್ಛ ಮತ್ತು ಸುಂದರವಾಗಿರುವಂತೆ ನೋಡಿಕೊಳ್ಳಬೇಕು’ ಎಂದರು.

‘ಇಲ್ಲಿಗೆ ಬರುವ ಭಕ್ತರು ಅಡುಗೆ ಮಾಡಿಕೊಳ್ಳಲು ಕಟ್ಟಡ ನಿರ್ಮಿಸಬೇಕು. ದೇವಸ್ಥಾನದಲ್ಲಿ ಸಿಬ್ಬಂದಿ ಕೊರತೆ ನೀಗಿಸುವಂತೆ ಸರ್ಕಾರದ ಗಮನಸೆಳೆಯುತ್ತೇನೆ’ ಎಂದು ತಿಳಿಸಿದರು.

ADVERTISEMENT

ದೇವಸ್ಥಾನದ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಜೀರಗ್ಯಾಳ ಸತ್ಕರಿಸಿದರು. ಸಮಿತಿ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.