ಕಾಗವಾಡ: ಸಮೀಪದ ಕುಡಚಿ ಪೊಲೀಸ್ ಠಾಣೆ ಹೆಡ್‌ಕಾನ್‌ಸ್ಟೆಬಲ್ ಯಲ್ಲಪ್ಪ ಭೋಜ (46) ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ಮೃತಪಟ್ಟ ಘಟನೆ ಭಾನುವಾರ ಕುಡಚಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತೀವ್ರ ಎದೆ ನೋವು ಕಾಣಿಸಿಕೊಂಡಾಗ ಅವರು ತಮ್ಮ ಸಹೋದ್ಯೋಗಿಗಳಿಗೆ ಮಾಹಿತಿ ನೀಡಿದ್ದಾರೆ. ಅವರನ್ನು ತಕ್ಷಣವೇ ಮಹಾರಾಷ್ಟ್ರದ ಸಾಂಗಲಿ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.
ಕುಡಚಿ ಚೆಕ್‌ಪೋಸ್ಟ್‌ನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅವರನ್ನು ನಿಯೋಜಿಸಲಾಗಿತ್ತು. ಅಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಒಬ್ಬ ಪುತ್ರ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.