ADVERTISEMENT

ಬೆಳಗಾವಿ: ಜಿಲ್ಲೆಯಾದ್ಯಂತ ಭಾರಿ ಮಳೆ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2020, 10:03 IST
Last Updated 5 ಆಗಸ್ಟ್ 2020, 10:03 IST
ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಸುರಿದ ಭಾರಿ ಮಳೆ, ಗಾಳಿಗೆ ಮನೆ ಕುಸಿದಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಸುರಿದ ಭಾರಿ ಮಳೆ, ಗಾಳಿಗೆ ಮನೆ ಕುಸಿದಿದೆ.   

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಬುಧವಾರ ಭಾರಿ ಮಳೆಯಾಗಿದೆ.

ಚಿಕ್ಕೋಡಿ, ಬೆಳಗಾವಿ, ರಾಮದುರ್ಗ, ಬೈಲಹೊಂಗಲ, ಕೌಜಲಗಿ, ಹಿರೇಬಾಗೇವಾಡಿ, ಸಾಂಬ್ರಾ, ಗೋಕಾಕ, ಅಥಣಿ, ಹಾರೂಗೇರಿ, ಸವದತ್ತಿ, ಯಮಕನಮರಡಿಯಲ್ಲಿ ನಿರಂತರ ಮಳೆಯಾಗುತ್ತಿದೆ.

ನಿರಂತರ ಮಳೆಯಿಂದಾಗಿ ಬೆಳಗಾವಿಯ ಎಪಿಎಂಸಿ ಗೋಡೆ ಶಿಥಿಲಗೊಂಡು, ನೆಲಕ್ಕುರುಳಿದೆ. ರಸ್ತೆಯ ಮೇಲೆಯೇ ದೊಡ್ಡ ದೊಡ್ಡ ಕಲ್ಲುಗಳು ಉರುಳಿ ಬಿದ್ದಿರುವುದರಿಂದ ಜ್ಯೋತಿ ನಗರ ಕಡೆ ಹೋಗುವ ಮಾರ್ಗ ಬಂದ್ ಆಗಿದೆ.

ADVERTISEMENT

ಬೆಳಗಾವಿ ತಾಲ್ಲೂಕಿನ ಕಡೋಲಿ- ದೇವಗಿರಿ ರಸ್ತೆಯ ಮೇಲೆ ಒಂದರಿಂದ ಎರಡು ಅಡಿಗಳಷ್ಟು ನೀರು ಹರಿಯುತ್ತಿದ್ದು, ವಾಹನಗಳ ಸಂಚಾರ ಸ್ಥಗಿತಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.