ADVERTISEMENT

ಬೆಳಗಾವಿ: ಎರಡನೇ ದಿನವೂ ಮುಂದುವರಿದ ಮಳೆ

ರಸ್ತೆಯಲ್ಲಿ ನಿಂತ ನೀರು: ಸಂಚಾರಕ್ಕೆ ಸಮಸ್ಯೆ

​ಪ್ರಜಾವಾಣಿ ವಾರ್ತೆ
Published 12 ಮೇ 2024, 14:08 IST
Last Updated 12 ಮೇ 2024, 14:08 IST
<div class="paragraphs"><p>ಬೆಳಗಾವಿ ನಗರದಲ್ಲಿ ಭಾನುವಾರ ಸಂಜೆ ಧಾರಾಕಾರ ಮಳೆ ಸುರಿಯಿತು</p></div>

ಬೆಳಗಾವಿ ನಗರದಲ್ಲಿ ಭಾನುವಾರ ಸಂಜೆ ಧಾರಾಕಾರ ಮಳೆ ಸುರಿಯಿತು

   

ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಭಾನುವಾರವೂ ಮಳೆ ಸುರಿಯಿತು.

ADVERTISEMENT

ಬೆಳಗಾವಿಯಲ್ಲಿ ಸತತ ಎರಡನೇ ದಿನವೂ ಗುಡುಗು–ಮಿಂಚು ಸಹಿತವಾಗಿ ವರುಣ ಅಬ್ಬರಿಸಿದ್ದರಿಂದ ವಾತಾವರಣ ತಂಪೇರಿತು. ಬೆಳಿಗ್ಗೆಯಿಂದ ಮೋಡ ಕವಿದಿತ್ತು. ಸಂಜೆ ಒಂದು ತಾಸಿಗೂ ಅಧಿಕ ಉತ್ತಮ ಮಳೆ ಸುರಿಯಿತು.

ಕೆಲವು ಮಾರ್ಗಗಳ ರಸ್ತೆಗಳಲ್ಲಿ ಅಪಾರ ಪ್ರಮಾಣದಲ್ಲಿ ನೀರು ನಿಂತಿದ್ದರಿಂದ ಸಂಚಾರಕ್ಕೆ ಸಮಸ್ಯೆಯಾಯಿತು. ಭಾನುವಾರ ರಜಾ ದಿನವಾದ್ದರಿಂದ ಮಾರುಕಟ್ಟೆಯಲ್ಲಿ ಜನದಟ್ಟಣೆ ಹೆಚ್ಚಿತ್ತು. ಏಕಾಏಕಿ ಮಳೆಯಾಗಿದ್ದರಿಂದ ವ್ಯಾಪಾರ ವಹಿವಾಟಿಗೆ ತೊಡಕಾಯಿತು. ಜನರು ಆಶ್ರಯಕ್ಕಾಗಿ ಪರದಾಡಿದರು.

ಗೋಕಾಕ, ಬೈಲಹೊಂಗಲ ತಾಲ್ಲೂಕಿನ ನೇಸರಗಿ, ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಮತ್ತಿತರ ಕಡೆ ಮಳೆಯಾಗಿದೆ.

ಬೆಳಗಾವಿ ನಗರದಲ್ಲಿ ಭಾನುವಾರ ಸಂಜೆ ಧಾರಾಕಾರ ಮಳೆ ಸುರಿಯಿತು

ಬೆಳಗಾವಿ ನಗರದಲ್ಲಿ ಭಾನುವಾರ ಸಂಜೆ ಸುರಿದ ಮಳೆಯಲ್ಲಿ ಯುವತಿಯರು ಕೊಡೆ ಹಿಡಿದು ಸಾಗಿದರು

ಧಾರಾಕಾರ ಮಳೆ: 8 ವಿದ್ಯುತ್ ಕಂಬಗಳಿಗೆ ಹಾನಿ

ಸಂಕೇಶ್ವರ: ಪಟ್ಟಣದಲ್ಲಿ ಶನಿವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಲಕ್ಷ್ಮಿ ಹಳ್ಳ ತುಂಬಿ ಹರಿಯಿತು. ಲಕ್ಷ್ಮಿ ದೇವಸ್ಥಾನ ಆವರಣಕ್ಕೆ ನೀರು ನುಗ್ಗಿತ್ತು. ಅಲ್ಲದೆ ರಸ್ತೆ ಮೇಲೆ ಅಪಾರ ಪ್ರಮಾಣದಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಿದರು. ಸಮೀಪದ ಅಮ್ಮಣಗಿಯಲ್ಲಿ ವಿದ್ಯುತ್ ಪರಿವರ್ತಕಕ್ಕೆ ಸಿಡಿಲು ಬಡಿದಿದ್ದು 8 ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ. ಅದೃಷ್ಟವಷಾತ್‌ ಯಾರಿಗೂ ಪ್ರಾಣ ಹಾನಿಯಾಗಿಲ್ಲ. ಅಮ್ಮಣಗಿಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.