ಎಂ.ಕೆ.ಹುಬ್ಬಳ್ಳಿ: ಪಟ್ಟಣದಲ್ಲಿ ಬುಧವಾರ ಮಧ್ಯಾಹ್ನ ಸುರಿದ ಭಾರಿ ಮಳೆಗೆ ರಸ್ತೆಗಳೆ ಮೇಲೆ ನೀರು ಹರಿಯಿತು.
ಚರಂಡಿಗಲ್ಲಿ ಮಳೆ ನೀರು ತುಂಬಿತು. ಪ್ಲಾಸ್ಟಿಕ್, ತ್ಯಾಜ್ಯ ವಸ್ತುಗಳು ತೇಲಿದವು. ತಗ್ಗು ಪ್ರದೇಶ, ಚರಂಡಿ ಪಕ್ಕದ ಕೆಲ ಮನೆಗಳಿಗೆ ನೀರು ನುಗ್ಗಿತು. ಹೆದ್ದಾರಿ ಕೆಳಗೆ ಹಾಗೂ ವಿವಿಧೆಡೆ ರಸ್ತೆಗಳು ಜಲಾವೃತಗೊಂಡವು. ಕೆಲಹೊತ್ತು ಸಂಚಾರಕ್ಕೆ ಸಮಸ್ಯೆಯಾಯಿತು.
ಮಂಗಳವಾರವೂ ಎಂ.ಕೆ. ಹುಬ್ಬಳ್ಳಿ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಮಳೆಯಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.