ADVERTISEMENT

ಚಿಕ್ಕೋಡಿ: ಮೂರು ಸೇತುವೆ ಜಲಾವೃತ

ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ

​ಪ್ರಜಾವಾಣಿ ವಾರ್ತೆ
Published 27 ಮೇ 2025, 16:30 IST
Last Updated 27 ಮೇ 2025, 16:30 IST
   

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ನೆರೆಯ ಮಹಾರಾಷ್ಟ್ರ ಹಾಗೂ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಚಿಕ್ಕೋಡಿ ತಾಲ್ಲೂಕಿನ ದೂಧಗಂಗಾ ನದಿಯ ಮಲಿಕವಾಡ– ದತ್ತವಾಡ, ಕೃಷ್ಣಾ ನದಿಯ ಕಲ್ಲೋಳ– ಯಡೂರ ಸೇತುವೆ, ನಿಪ್ಪಾಣಿ ತಾಲ್ಲೂಕಿನ ವೇದಗಂಗಾ ನದಿಯ ಬಾರವಾಡ-ಕುನ್ನೂರ ಸೇತುವೆ ಜಲಾವೃತಗೊಂಡು ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ.

ಮಹಾರಾಷ್ಟ್ರದ ಕೊಯ್ನಾದಲ್ಲಿ 2.9 ಸೆಂ.ಮೀ, ಕಾಳಮ್ಮವಾಡಿಯಲ್ಲಿ 3.6, ಮಹಾಬಳೇಶ್ವರದಲ್ಲಿ 2.4, ನವಜಾದಲ್ಲಿ 4.5, ರಾಧಾನಗರಿಯಲ್ಲಿ 2.4, ಪಾಟಗಾಂವದಲ್ಲಿ 7.5 ಸೆಂ.ಮೀ ಮಳೆಯಾಗಿದೆ. ಮಹಾರಾಷ್ಟ್ರದ ರಾಜಾಪೂರೆ ಬ್ಯಾರೇಜ್ ನಿಂದ 22,250 ಕ್ಯುಸೆಕ್, ದೂಧಗಂಗಾ ನದಿಯಿಂದ 10,910 ಕ್ಯುಸೆಕ್ ಸೇರಿ ಕಲ್ಲೋಳ-ಯಡೂರ ಸೇತುವೆ ಬಳಿಯಲ್ಲಿ ಕೃಷ್ಣಾ ನದಿಗೆ 33,160 ಕ್ಯುಸೆಕ್ ನೀರು ಹೊರ ಹರಿವು ಉಂಟಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT