ADVERTISEMENT

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ: ಕೃಷ್ಣಾ ನದಿ ನೀರಿನ ಮಟ್ಟ ದಿಢೀರ್‌ ಏರಿಕೆ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2024, 12:12 IST
Last Updated 26 ಆಗಸ್ಟ್ 2024, 12:12 IST
<div class="paragraphs"><p>ದೂಧಗಂಗಾ ನದಿ ನೀರಿನ ಮಟ್ಟ ಏರಿದ್ದರಿಂದ ಚಿಕ್ಕೋಡಿ ತಾಲ್ಲೂಕಿನ ಮಲಿಕವಾಡ– ದತ್ತವಾಡ ಸೇತುವೆ ಸೋಮವಾರ ಮುಳುಗಡೆ ಆಯಿತು </p></div>

ದೂಧಗಂಗಾ ನದಿ ನೀರಿನ ಮಟ್ಟ ಏರಿದ್ದರಿಂದ ಚಿಕ್ಕೋಡಿ ತಾಲ್ಲೂಕಿನ ಮಲಿಕವಾಡ– ದತ್ತವಾಡ ಸೇತುವೆ ಸೋಮವಾರ ಮುಳುಗಡೆ ಆಯಿತು

   

ಪ್ರಜಾವಾಣಿ ಚಿತ್ರ: ಚಂದ್ರಶೇಖರ ಎಸ್. ಚಿನಕೇಕರ

ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಹಾಗೂ ಜಿಲ್ಲೆಯ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ, ದೂಧಗಂಗಾ ನದಿಯ ಮಲಿಕವಾಡ– ದತ್ತವಾಡ ಸೇತುವೆ ಸೋಮವಾರ ಜಲಾವೃತಗೊಂಡಿದೆ.

ADVERTISEMENT

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ರಾಜಾಪೂರ ಬ್ಯಾರೇಜಿನಿಂದ ಕೃಷ್ಣಾ ನದಿಗೆ 47,250 ಕ್ಯುಸೆಕ್ ಹೊರ ಹರಿವು ಇದೆ. ದೂಧಗಂಗಾ ನದಿಗೆ 15,840 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ–ಯಡೂರ ಬ್ಯಾರೇಜ್ ಬಳಿಯಲ್ಲಿ ಕೃಷ್ಣಾ ನದಿಗೆ 63,090 ಕ್ಯುಸೆಕ್ ನೀರು ಹರಿದು ಬರುತ್ತಿದೆ.

ಕೃಷ್ಣಾ, ದೂಧಗಂಗಾ ಹಾಗೂ ವೇದಗಂಗಾ ನದಿಗಳ ನೀರಿನ ಮಟ್ಟ ಸೋಮವಾರ ದಿಢೀರ್‌ ಏರಿಕೆಯಾಗಿದ್ದು, ನದಿ ತೀರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.