ADVERTISEMENT

ಘಟಪ್ರಭಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ: ಹಿಡಕಲ್‌ ಜಲಾಶಯಕ್ಕೆ ಒಳಹರಿವು ಆರಂಭ

​ಪ್ರಜಾವಾಣಿ ವಾರ್ತೆ
Published 4 ಜುಲೈ 2023, 12:37 IST
Last Updated 4 ಜುಲೈ 2023, 12:37 IST
   

ಯಮಕನಮರಡಿ (ಬೆಳಗಾವಿ): ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಮತ್ತು ಘಟಪ್ರಭಾ ನದಿಯ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಸುರಿಯುತ್ತಿರುವ ಪರಿಣಾಮ ಹುಕ್ಕೇರಿ ತಾಲ್ಲೂಕಿನ ಹಿಡಕಲ್‌ ಜಲಾಶಯಕ್ಕೆ ಸೋಮವಾರದಿಂದ ಒಳಹರಿವು ಆರಂಭವಾಗಿದೆ.

51 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಹಿಡಕಲ್‌ನಲ್ಲಿ ಜುಲೈ 4ರಂದು 2.015 ಟಿಎಂಸಿ ಅಡಿ ನೀರು ಸಂಗ್ರಹವಿದೆ. ಸೋಮವಾರ 69 ಕ್ಯೂಸೆಕ್‌ ಒಳಹರಿವು ಇತ್ತು. ಮಂಗಳವಾರ ಆ ಪ್ರಮಾಣ 85 ಕ್ಯೂಸೆಕ್‌ಗೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT