ADVERTISEMENT

ಬೆಳಗಾವಿ ಜಿಲ್ಲೆಯಲ್ಲಿ ಮುಂದುವರಿದ ಮಳೆ: ಕೆಲವೆಡೆ ಶಾಲೆಗಳಿಗೆ ನಾಳೆ ರಜೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2024, 15:37 IST
Last Updated 25 ಜುಲೈ 2024, 15:37 IST
<div class="paragraphs"><p>ಮಳೆ ( ಸಾಂಕೇತಿಕ ಚಿತ್ರ)&nbsp;</p></div>

ಮಳೆ ( ಸಾಂಕೇತಿಕ ಚಿತ್ರ) 

   

ಬೆಳಗಾವಿ: ಜಿಲ್ಲೆಯಲ್ಲಿ ವ್ಯಾಪಕ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಗೋಕಾಕ, ಮೂಡಲಗಿ, ರಾಯಬಾಗ ಮತ್ತು ಹುಕ್ಕೇರಿ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 26ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್ ಆದೇಶಿಸಿದ್ದಾರೆ.

ಪರೀಕ್ಷೆ ಮುಂದೂಡಿಕೆ: ಇಲ್ಲಿನ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಮೈಸೂರಿನ ಕರ್ನಾಟಕ ರಾಜ್ಯ ಗಂಗೂಬಾಯಿ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಜು.27, 28ರಂದು ನಡೆಸಬೇಕಿದ್ದ ವಿಶೇಷ ಸಂಗೀತ, ನೃತ್ಯ ಮತ್ತು ತಾಳವಾದ್ಯ ಪರೀಕ್ಷೆ ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.