
ಪ್ರಜಾವಾಣಿ ವಾರ್ತೆ
ಹೆಲಿಕಾಪ್ಟರ್
(ಪ್ರಾತಿನಿಧಿಕ ಚಿತ್ರ)
ಬೆಳಗಾವಿ: ಇಂಧನ ಸಚಿವ ಕೆ.ಜೆ.ಜಾರ್ಜ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಶುಕ್ರವಾರ ಇಲ್ಲಿನ ಸುವರ್ಣ ವಿಧಾನಸೌಧದ ಹೆಲಿಪ್ಯಾಡ್‌ನಲ್ಲಿ ತುರ್ತು ಭೂ ಸ್ಪರ್ಶ ಮಾಡಿತು.
ಸಚಿವರು ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಸಿಂಗಲ್ ಎಂಜಿನ್ ಹೆಲಿಕಾಪ್ಟರ್ ಟೇಕ್ ಆಫ್ ಆಗಿತ್ತು. ಆದರೆ, ಕೆಲಹೊತ್ತು ಹಾರಾಡಿದ್ದು, ಪ್ರತಿಕೂಲ ಹವಾಮಾನದಿಂದ ಗೊಂದಲ ಆದಂತಿತ್ತು. ಪೈಲಟ್ ಸುರಕ್ಷಿತವಾಗಿ ಕೆಳಗಿಳಿಸಿದರು. ಹವಾಮಾನ ಸಹಜ ಸ್ಥಿತಿಗೆ ಬಂದ ಬಳಿಕ ಹೆಲಿಕಾಪ್ಟರ್ ಮತ್ತೆ ಬೆಂಗಳೂರಿನತ್ತ ಹಾರಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.