ಬೆಳಗಾವಿ: ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಭಾನುವಾರ ಇಲ್ಲಿನ ಕಲಾಮಂದಿರದ ಆವರಣದ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ಫೋಟೊಗೆ ಮಾಲಾರ್ಪಣೆ ಮಾಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರವೀಂದ್ರ ಹಕಾಟಿ, ರೆಡ್ಡಿ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಮುಳ್ಳೂರ, ಉಪಾಧ್ಯಕ್ಷ ಬಸವರಾಜ ಬಾವಲತ್ತಿ, ಜಂಟಿ ಕಾರ್ಯದರ್ಶಿ ಮಂಜುನಾಥ ಪಾಟೀಲ, ಸಮಾಜದ ಹಿರಿಯರಾದ ರಾಜೇಂದ್ರ ಪಾಟೀಲ, ಶಂಕರ ಅರಕೇರಿ, ರವೀಂದ್ರ ಹಿರೇದೇಸಾಯಿ, ರಾಮಣ್ಣ ಅರಕೇರಿ, ಲತಾ ರಾಮಣ್ಣ ಅರಕೇರಿ, ಸವಿತಾ ನಾಡಗೌಡ, ಇಂದಿರಾಬಾಯಿ ಮಳಲಿ, ಬಿ.ಎನ್. ನಾಡಗೌಡ, ನಾರಾಯಣ ಕೆಂಚರೆಡ್ಡಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.