ADVERTISEMENT

ಹಿಡಕಲ್ ಡ್ಯಾಂ: ಘಟಪ್ರಭಾ ನದಿಗೆ ನೀರು ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 27 ಜುಲೈ 2025, 2:43 IST
Last Updated 27 ಜುಲೈ 2025, 2:43 IST
<div class="paragraphs"><p>ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಡ್ಯಾಂ</p></div>

ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಡ್ಯಾಂ

   

ಹುಕ್ಕೇರಿ: ಜಲಾನಯನ ಪ್ರದೇಶದಲ್ಲಿ ಸತತ ಮಳೆಯಾಗುತ್ತಿರುವುದರಿಂದ ಘಟಪ್ರಭಾ ನದಿಯ ಒಳಹರಿವು ಶನಿವಾರ ಹೆಚ್ಚಾಗಿದೆ.  ಒಳ ಹರಿವು ಹೆಚ್ಚಾಗುತ್ತಿರುವುದರಿಂದ ಶನಿವಾರ ಮಧ್ಯಾಹ್ನ 4 ಗಂಟೆಗೆ ಕ್ರಸ್ಟ್ ಗೇಟ್ ಮೂಲಕ 5,000 ಕ್ಯುಸೆಕ್ ನೀರನ್ನು ನದಿ ಪಾತ್ರಕ್ಕೆ ಬಿಡಲಾಗಿದೆ ಎಂದು ಎಇಇ ಜಗದೀಶ್ ಬಿ.ಕೆ.ತಿಳಿಸಿದ್ದಾರೆ.

ತಾಲ್ಲೂಕಿನಲ್ಲಿನ ಹಿಡಕಲ್ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಏರಿಕೆಯಾಗಿದ್ದು, 2170.300 ಅಡಿಗೆ (ಗರಿಷ್ಟ 2175 ಅಡಿ) ತಲುಪಿದೆ. ಒಳಹರಿವಿನ ಪ್ರಮಾಣ 12,227 ಕ್ಯುಸೆಕ್ ಇದೆ.

ADVERTISEMENT

ಎಚ್ಚರಿಕೆ: ಜಲಾಶಯದ ಒಳಹರಿವು ಹೆಚ್ಚಾದಂತೆ ಮತ್ತೆ 20,000 ಕ್ಯುಸೆಕ್ ನೀರು ನದಿ ಪಾತ್ರಕ್ಕೆ ಬಿಡುವ ಸಾಧ್ಯತೆ ಇರುವುದರಿಂದ ಘಟಪ್ರಭಾ ಮತ್ತು ಹಿರಣ್ಯಕೇಶಿ ನದಿ ತಟದ ಜನರು ತಮ್ಮ ಜಾನುವಾರು ಸಮೇತ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.