
ಪ್ರಜಾವಾಣಿ ವಾರ್ತೆ
ಬೆಳಗಾವಿ: ತಾಲ್ಲೂಕಿನ ಹಿಂಡಲಗಾದ ಕೇಂದ್ರ ಕಾರಾಗೃಹದಲ್ಲಿ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ ಮಹಾನಿರ್ದೇಶಕ ಅಲೋಕಕುಮಾರ್ ನೇತೃತ್ವದಲ್ಲಿ ‘ಕಾರಾಗೃಹ ಸುಧಾರಣಾ ಸಂಕಲ್ಪ ಅಭಿಯಾನ’ದಡಿ ಈಚೆಗೆ ಸಿಬ್ಬಂದಿ ತಪಾಸಣೆ ಕೈಗೊಂಡಾಗ, ನಾಲ್ಕು ಮೊಬೈಲ್ ಮತ್ತು ಒಂದು ಯುಎಸ್‌ಬಿ ಕೇಬಲ್ ಪತ್ತೆಯಾಗಿದೆ.
ನಿಷೇಧಿತ ವಸ್ತುಗಳನ್ನು ಸಾಗಿಸಿದವರು, ಇದಕ್ಕೆ ಸಹಕರಿಸಿದವರು ಹಾಗೂ ಕಾರಾಗೃಹದಲ್ಲಿ ಬಳಸಿದವರ ವಿರುದ್ದ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಿಷೇಧಿತ ವಸ್ತುಗಳನ್ನು ಪತ್ತೆಹೆಚ್ಚಿದ ಸಿಬ್ಬಂದಿಗೆ ₹12 ಸಾವಿರ ನಗದು ಬಹುಮಾನ ಮತ್ತು ಪ್ರಶಂಸನಾ ಪತ್ರವನ್ನು ಅಲೋಕಕುಮಾರ್ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.