ADVERTISEMENT

ಹಿಂಡಲಗಾ: ಇಬ್ಬರು ಕೈದಿಗಳಿಗೆ ಕೋವಿಡ್ ದೃಢ

​ಪ್ರಜಾವಾಣಿ ವಾರ್ತೆ
Published 15 ಮೇ 2021, 7:29 IST
Last Updated 15 ಮೇ 2021, 7:29 IST
   

ಬೆಳಗಾವಿ: ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದ ಇಬ್ಬರಿಗೆ ಕೋವಿಡ್–19 ದೃಢಪಟ್ಟಿದೆ.

‘ಪೆರೋಲ್ ಮೇಲೆ ಹೋಗಿ ಮರಳಿದ್ದ ವ್ಯಕ್ತಿ ಹಾಗೂ ಒಬ್ಬ ವಿಚಾರಣಾಧೀನ ಕೈದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಲಾಗಿದ್ದ ಇಬ್ಬರನ್ನು ವರದಿ ಬಂದ ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಕೋವಿಡ್ ಮೊದಲನೇ ಅಲೆಯ ಸಂದರ್ಭದಲ್ಲಿ 37 ಕೈದಿಗಳಿಗೆ ಸೋಂಕು ದೃಢಪಟ್ಟಿತ್ತು. ಇಲ್ಲಿ ಸದ್ಯಕ್ಕೆ 861 ಶಿಕ್ಷೆಗೊಳಗಾದವರು ಹಾಗೂ ವಿಚಾರಣಾಧೀನ ಕೈದಿಗಳು ಇದ್ದಾರೆ.

ADVERTISEMENT

ಹೊಸದಾಗಿ ಜೈಲಿಗೆ ಬರುವವರಿಗೆ ಕೋವಿಡ್ ನೆಗಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. ವರದಿ ಬರುವರೆಗೆ ಅವರನ್ನು ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಲಾಗುತ್ತದೆ. 14 ದಿನಗಳ ಕ್ವಾರಂಟೈನ್ ಅವಧಿ ಮುಗಿಯುವವರೆಗೆ ಅಲ್ಲಿರಬೇಕಾಗುತ್ತದೆ. ಬಳಿಕ ಸಾಮಾನ್ಯ ಸೆಲ್‌ಗೆ ಕಳುಹಿಸಲಾಗುತ್ತದೆ. ಕೊರೊನಾ ವ್ಯಾಪಿಸುತ್ತಿರುವುದರಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ, ವಾರಕ್ಕೊಮ್ಮೆ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.