ಬೆಳಗಾವಿ: ‘ಹಿಂದೂ ಧಾರ್ಮಿಕ ಆಚರಣೆಯಲ್ಲಿ ನಂಬಿಕೆ ಹೊಂದಿರದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಮೈಸೂರಿನ ದಸರಾ ಉದ್ಘಾಟನೆಗೆ ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮ ಹಿಂದೂ ವಿರೋಧಿ ನೀತಿಯಾಗಿದೆ’ ಎಂದು ಮಾಜಿ ಶಾಸಕ ಸಂಜಯ ಪಾಟೀಲ ಆರೋಪಿಸಿದರು.
ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ದೇವಿ ಮೂರ್ತಿಗೆ ಪೂಜೆ ನೆರವೇರಿಸಿ, ಪುಷ್ಪವೃಷ್ಠಿ ಮಾಡುವುದು ಪದ್ಧತಿ. ಅನ್ಯಧರ್ಮೀಯರು ಈ ಹಿಂದೂ ಧಾರ್ಮಿಕ ಕಾರ್ಯ ಒಪ್ಪಲು ಸಾಧ್ಯವಿಲ್ಲ. ಹೀಗಿರುವಾಗ ಸರ್ಕಾರವು ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿ ಹಿಂದೂಗಳ ಭಾವನೆ ಕೆಣಕಲು ಹೊರಟಿದೆ’ ಎಂದು ದೂರಿದರು.
‘ಬಾನು ಮುಷ್ತಾಕ್ ಅವರಿಗೆ ನೀಡಿದ ಆಹ್ವಾನವನ್ನು ಸರ್ಕಾರ ತಕ್ಷಣವೇ ಹಿಂಪಡೆಯಬೇಕು. ಹಿಂದೂ ಧಾರ್ಮಿಕ ನಂಬಿಕೆಯಲ್ಲಿ ವಿಶ್ವಾಸ ಹೊಂದಿದವರನ್ನು ಆಹ್ವಾನಿಸಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.