ADVERTISEMENT

ಹುಕ್ಕೇರಿ | ಹಿರಾ ಶುಗರ್ಸ್: ಟನ್‌ ಕಬ್ಬಿಗೆ ₹3 ಸಾವಿರ ನಿಗದಿ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2023, 13:20 IST
Last Updated 13 ನವೆಂಬರ್ 2023, 13:20 IST
   

ಹುಕ್ಕೇರಿ: ತಾಲ್ಲೂಕಿನ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯು ಪ್ರಸಕ್ತ ಸಾಲಿಗೆ ಕಬ್ಬು ಪೂರೈಸಿದ ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹3 ಸಾವಿರ ದರ ಕೊಡಲು ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ಕಾರ್ಖಾನೆ ಅಧ್ಯಕ್ಷರೂ ಆಗಿರುವ ಶಾಸಕ ನಿಖಿಲ್ ಕತ್ತಿ ಹೇಳಿದರು.

ಸೋಮವಾರ ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾರ್ಖಾನೆಯು 10 ಲಕ್ಷ ಟನ್ ಕಬ್ಬು ನುರಿಸುವ ಗುರಿ ಹೊಂದಿದ್ದು, ಕಬ್ಬು ಬೆಳೆದ ರೈತರು ತಮ್ಮ ಕಬ್ಬನ್ನು ಕಾರ್ಖಾನೆಗೆ ಪೂರೈಸಿ ಗುರಿ ಮುಟ್ಟಲು ಸಹಕರಿಸುವಂತೆ ವಿನಂತಿಸಿದರು. ಆದಷ್ಟು ಬೇಗ ಕಬ್ಬು ಪೂರೈಸಿದ ರೈತರ ಬ್ಯಾಂಕ್ ಖಾತೆಗೆ ಹಣ ಜಮಾವಣೆ ಮಾಡುವುದಾಗಿ ತಿಳಿಸಿದರು.

ಉಪಾಧ್ಯಕ್ಷ ಶ್ರೀಶೈಲಪ್ಪ ಮದಗುಮ್ಮ, ನಿರ್ದೇಶಕರಾದ ಶಿವನಾಯಿಕ ನಾಯಿಕ, ಎಸ್.ಎಸ್.ಶಿರಕೋಳಿ, ಸುರೇಶ್ ಬೆಲ್ಲದ, ಅಶೋಕ ಪಟ್ಟಣಶೆಟ್ಟಿ, ಬಸು ಮರಡಿ, ಸುರೇಶ್ ದೊಡಲಿಂಗನವರ, ಎಂಡಿ ಸಾತಪ್ಪ ಕರ್ಕಿನಾಯಿಕ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.