ಹಿರೇಬಾಗೇವಾಡಿ: ಸಮೀಪದ ಕಮಕಾರಟ್ಟಿ ಸಮೀಪದ ರಾಷ್ಟ್ರೀಯ ಹೆದ್ದಾರಿ ಸೇತುವೆ ಬಳಿ ಮಂಗಳವಾರ ನಿಂತಿದ್ದ ಗೂಡ್ಸ್ ವಾಹನಕ್ಕೆ ಹಿಂಬದಿಯಿಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನಾಗೇರಹಾಳ ಗ್ರಾಮದ ಈರಪ್ಪ ಸೋಮಪ್ಪ ಅಂಗಡಿ (45) ಮೃತರು. ಧಾರವಾಡದ ಕಡೆಯಿಂದ ಬೆಳಗಾವಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.