ADVERTISEMENT

ಹಿರೇಬಾಗೇವಾಡಿಯಲ್ಲಿ ಕಳ್ಳನ ಬಂಧನ: ಐದು ಬೈಕ್‌ ವಶ

​ಪ್ರಜಾವಾಣಿ ವಾರ್ತೆ
Published 15 ಜುಲೈ 2025, 3:15 IST
Last Updated 15 ಜುಲೈ 2025, 3:15 IST
<div class="paragraphs"><p>ಬಂಧನ</p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಹಿರೇಬಾಗೇವಾಡಿ: ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಸಂಬಂಧ ಸವದತ್ತಿ ತಾಲ್ಲೂಕಿನ ಇಂಚಲದ ಆರೋಪಿ ಸಂತೋಷ ಬೇವಿನಕೊಪ್ಪನನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹2.35 ಲಕ್ಷ ಮೌಲ್ಯದ ಐದು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.

ADVERTISEMENT

‘ಹಿರೇಬಾಗೇವಾಡಿಯಲ್ಲಿ ಸೋಮವಾರ ಸಂಶಯಾಸ್ಪದ ರೀತಿಯಲ್ಲಿ ಸಂಚರಿಸುತ್ತಿದ್ದ ಸಂತೋಷ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಐದು ದ್ವಿಚಕ್ರ ವಾಹನ ಕದ್ದಿದ್ದಾಗಿ ಒಪ್ಪಿಕೊಂಡಿದ್ದಾನೆ. ಬೈಲಹೊಂಗಲ ತಾಲ್ಲೂಕಿನ ನೇಸರಗಿ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು, ಹಿರೇಬಾಗೇವಾಡಿ, ಹುಬ್ಬಳ್ಳಿ ಮತ್ತು ಬಾಗಲಕೋಟೆ ಜಿಲ್ಲೆಯ ಲೋಕಾಪುರದಲ್ಲಿ ನಡೆದಿದ್ದ ತಲಾ ಒಂದು ಪ್ರಕರಣ ಭೇದಿಸಿದಂತಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.