
ಹಿರೆಬಾಗೇವಾಡಿ: ಇಲ್ಲಿನ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದ 2011–12ನೇ ಬ್ಯಾಚ್‌ನ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಹಾಗೂ ಗುರುವಂದನಾ ಕಾರ್ಯಕ್ರಮವು ಸೋಮವಾರ ಸಂಭ್ರಮದಿಂದ ನಡೆಯಿತು.
ವೇದಿಕೆಗೆ ಎಲ್ಲ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಯನ್ನು ಪುಷ್ಪವೃಷ್ಟಿಯ ಮೂಲಕ ಸ್ವಾಗತಿಸಲಾಯಿತು. ವೇದಿಕೆಯಲ್ಲಿ ಎಲ್ಲರನ್ನೂ ಆತ್ಮೀಯವಾಗಿ ಸನ್ಮಾನಿಸಲಾಯಿತು.
‘ನಮ್ಮ ವಿದ್ಯಾರ್ಥಿಗಳು ದೇಶದ ಉತ್ತಮ ಪ್ರಜೆಗಳಾಗಿದ್ದಾರೆ. ಈ ಬ್ಯಾಚಿನ ವಿದ್ಯಾರ್ಥಿಗಳು ಎಲ್ಲ ಕ್ಷೇತ್ರಗಳಲ್ಲಿ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಉತ್ತಮ ಸಾಧನೆಯನ್ನು ಮಾಡಿದ್ದು ಹೆಮ್ಮೆ ತಂದಿದೆ’ ಎಂದು ಎಲ್ಲ ಶಿಕ್ಷಕರು ಹರ್ಷ ವ್ಯಕ್ತಪಡಿಸಿದರು.
14 ವರ್ಷಗಳ ನಂತರ ಭೇಟಿಯಾದ ಎಲ್ಲ ವಿದ್ಯಾರ್ಥಿಗಳಲ್ಲಿ ಸಂತೋಷದ ಕ್ಷಣಗಳನ್ನು ಹಂಚಿಕೊಂಡರು. ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಉಪಾಹಾರ ಹಾಗೂ ಊಟದ ವ್ಯವಸ್ಥೆ ಮಾಡಲಾಯಿತು. 14ನೇ ವರ್ಷದ ಸವಿನೆನಪಿನ ಕಾಣಿಕೆ ನೀಡಿ ಆಯೋಜಕರು ಶುಭಕೋರಿದರು.
2012–13ನೇ ಸಾಲಿನ ಎಲ್ಲ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಕುಟುಂಬದ ಸಮೇತ ಪಾಲ್ಗೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.