
ಉಗರಗೋಳ: ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಹೊಸ್ತಿಲ ಹುಣ್ಣಿಮೆ ಪ್ರಯುಕ್ತ ಗುರುವಾರ ಜಾತ್ರೆ ನಡೆಯಿತು. ಕರ್ನಾಟಕ, ಮಹಾರಾಷ್ಟ್ರದಿಂದ ಆಗಮಿಸಿದ್ದ ಭಕ್ತರು, ಶ್ರದ್ಧೆಯಿಂದ ಧಾರ್ಮಿಕ ಆಚರಣೆ ಕೈಗೊಂಡರು.
ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ಬುಧವಾರ ಯಲ್ಲಮ್ಮ ದೇವಿಯ ಕಂಕಣ ಮಂಗಳಸೂತ್ರ ವಿಸರ್ಜನೋತ್ಸವ ಕಾರ್ಯಕ್ರಮ ನಡೆದಿತ್ತು. ಹೂಲಿಯ ಹಿರೇಮಠದ ಅಜ್ಜಯ್ಯ ಶಾಸ್ತ್ರಿ ವೈದಿಕತ್ವದಲ್ಲಿ ಗುರುವಾರ ಮಹಾಯಜ್ಞ ವಿಧಿವತ್ತಾಗಿ ನೆರವೇರಿತು.
ಯಲ್ಲಮ್ಮ ದೇವಿ ತವರಾದ ಹರಳಕಟ್ಟಿಯಿಂದ ಹಿರಿಯರು ಸೀರೆ, ಕುಪ್ಪಸ, ಬಳೆಗಳು, ಅರಿಸಿಣ, ಕುಂಕುಮ ತಂದು, ಧಾರ್ಮಿಕ ವಿಧಿವಿಧಾನ ಕೈಗೊಂಡರು.
ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ, ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ ಇದ್ದರು.
ಯಲ್ಲಮ್ಮನಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಉಗರಗೋಳ, ಜೋಗುಳಬಾವಿ ಮತ್ತು ಸವದತ್ತಿ ಮಾರ್ಗದ ರಸ್ತೆಗಳಲ್ಲಿ ವಾಹನದಟ್ಟಣೆ ಹೆಚ್ಚಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.