ನಿಪ್ಪಾಣಿ(ಬೆಳಗಾವಿ): ಸತತ ಮಳೆಯಿಂದಾಗಿ ಇಲ್ಲಿನ ಜತ್ರಾಟ ವೇಸ್‌ನಲ್ಲಿ ಭಾನುವಾರ ಬೆಳಿಗ್ಗೆ ಪಕ್ಕದ ಮನೆಯ ಗೋಡೆ ತಗಡಿನ ಶೆಡ್ ಮೇಲೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ತಿರುಪತಿ ರಾಜಾರಾಮ ವಟಕರ್(50) ಮೃತರು.
ಘಟನಾ ಸ್ಥಳಕ್ಕೆ ತಹಶೀಲ್ದಾರ್ ಮುಜಫ್ಫರ್ ಬಳಿಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿಪ್ಪಾಣಿಯ ಬಸವೇಶ್ವರ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.