ADVERTISEMENT

ಬೆಳಗಾವಿ ಜಿಲ್ಲೆಯಲ್ಲಿ 1,240 ಮನೆಗಳಿಗೆ ಹಾನಿ: ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ

​ಪ್ರಜಾವಾಣಿ ವಾರ್ತೆ
Published 25 ಜುಲೈ 2021, 13:39 IST
Last Updated 25 ಜುಲೈ 2021, 13:39 IST
ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನಲ್ಲಿ ಕೃಷ್ಣಾ ನದಿ ಪ್ರವಾಹದಿಂದ ಹಲ್ಯಾಳ ಬಳಿ ನೂರಾರು ಎಕರೆ ಜಮೀನಿಗೆ ನೀರು ನುಗ್ಗಿದೆ
ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನಲ್ಲಿ ಕೃಷ್ಣಾ ನದಿ ಪ್ರವಾಹದಿಂದ ಹಲ್ಯಾಳ ಬಳಿ ನೂರಾರು ಎಕರೆ ಜಮೀನಿಗೆ ನೀರು ನುಗ್ಗಿದೆ   

ಬೆಳಗಾವಿ: ‘ಜಿಲ್ಲೆಯಲ್ಲಿ ಒಂದು ವಾರದಲ್ಲಿ ವಾಡಿಕೆಗಿಂತಲೂ ಶೇ.60ರಷ್ಟು ಅಧಿಕ‌ ಮಳೆಯಾಗಿದೆ. ಮೂವರ ಸಾವಾಗಿದೆ. 40 ಪೂರ್ಣ ಮತ್ತು 1,200ಕ್ಕೂ ಹೆಚ್ಚು ಮನೆಗಳು ಭಾಗಶಃ ಕುಸಿದಿವೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

‘ಜಿಲ್ಲೆಯಲ್ಲಿ ಅನೇಕ ಕಡೆಗಳಲ್ಲಿ ಬೆಳೆ ಜಲಾವೃತಗೊಂಡಿವೆ. ಒಂದು ವಾರದಲ್ಲಿ ಜಂಟಿ ಸಮೀಕ್ಷೆ ನಡೆಸಿ ಹಾನಿಯ ಮಾಹಿತಿ ಕಲೆ ಹಾಕಲಾಗುವುದು. 37 ಸೇತುವೆಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ. ಖಾನಾಪುರ ತಾಲ್ಲೂಕಿನ ಎರಡು ಸೇತುವೆ ಹೊರತುಪಡಿಸಿ ಉಳಿದ ಕಡೆ ಪರ್ಯಾಯ ಮಾರ್ಗಗಳಿವೆ. ಪ್ರವಾಹದಿಂದ ಬಾಧಿತವಾದ ಗ್ರಾಮಗಳಲ್ಲಿನ ಜನರನ್ನು ರಕ್ಷಿಸಿ ತಾತ್ಕಾಲಿಕವಾಗಿ ಕಾಳಜಿ ಕೇಂದ್ರದಲ್ಲಿ ಆಸರೆ ಒದಗಿಸಲಾಗಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT