ADVERTISEMENT

‘ಬೆಣಿವಾಡ ಪಿಕೆಪಿಎಸ್: ₹ 27 ಲಕ್ಷ ಲಾಭ’

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2022, 15:40 IST
Last Updated 21 ಸೆಪ್ಟೆಂಬರ್ 2022, 15:40 IST
ಹುಕ್ಕೇರಿ ತಾಲ್ಲೂಕಿನ ಬೆಣಿವಾಡ ಗ್ರಾಮದ ಪಿಕೆಪಿಎಸ್ ಸಂಘದ ವಾರ್ಷಿಕ ಸಭೆಯಲ್ಲಿ ಉಮೇಶ ಕತ್ತಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು
ಹುಕ್ಕೇರಿ ತಾಲ್ಲೂಕಿನ ಬೆಣಿವಾಡ ಗ್ರಾಮದ ಪಿಕೆಪಿಎಸ್ ಸಂಘದ ವಾರ್ಷಿಕ ಸಭೆಯಲ್ಲಿ ಉಮೇಶ ಕತ್ತಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು   

ಪ್ರಜಾವಾಣಿ ವಾರ್ತೆ

ಹುಕ್ಕೇರಿ: ತಾಲ್ಲೂಕಿನ ಬೆಣಿವಾಡ ಗ್ರಾಮದ ಪ್ರಾಥಮಿಕ ಕೃಷಿ
ಪತ್ತಿನ ಸಹಕಾರಿ ಸಂಘದ 69ನೇ ವಾರ್ಷಿಕ ಸಭೆ ನಿರೂಪಾದೇಶ್ವರ ಅಜ್ಜನವರ ಮಠದ ಆವರಣದಲ್ಲಿ ಜರುಗಿತು.

ಸಂಘದ ಅಧ್ಯಕ್ಷ ಮಾಹಾಲಿಂಗ ಸನದಿ ಅವರು, ‘ನಮ್ಮ ಸಹಕಾರ ಸಂಘವು ಉಮೇಶ್ ಕತ್ತಿ ಹಾಗೂ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಅವರ ಸಹಕಾರದಿಂದ ಉನ್ನತ ಮಟ್ಟಕ್ಕೆ ತಲುಪಿದೆ. ಸಂಘದ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ನಡೆದಿದೆ’ ಎಂದರು.

ADVERTISEMENT

ಸಿಇಒ ಬಸವರಾಜ ಹವಾಲ್ದಾರ್, ‘ಸಂಘವು ₹ 27.16 ಲಕ್ಷ ಲಾಭ ಗಳಿಸಿದೆ’ ಎಂದು ತಿಳಿಸಿದರು.

ಸಚಿವ ಉಮೇಶ್ ಕತ್ತಿ ಅವರ ಭಾವಚಿತ್ರಕ್ಕೆ ಪೂಜಿಸಿ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.

ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ನಿರ್ದೇಶಕ ಕೆಂಚಪ್ಪ ಬೆಣಚಿನಮರಡಿ, ರಾಜು ಪಾಟೀಲ, ತೇಜಗೌಡ ಪಾಟೀಲ, ಬಸವರಾಜ ನಾಯಿಕ, ಸಂಘದ ಉಪಾಧ್ಯಕ್ಷ ಬಸವರಾಜ ಕೊಳವಿ, ನಿರ್ದೇಶಕರು, ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.