ಹುಕ್ಕೇರಿ: ತಾಲ್ಲೂಕಿನ ನಿಡಸೋಸಿಯಲ್ಲಿ ಸಂಕೇಶ್ವರ ಯೋಜನಾ ಕಚೇರಿ, ಅಮ್ಮಿನಭಾವಿ ಕಾರ್ಯಕ್ಷೇತ್ರದ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ, 120 ಬಡ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ಮುಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಮಂಗಳವಾರ ನಡೆಯಿತು.
ಶಾಸಕ ನಿಖಿಲ್ ಕತ್ತಿ ಮಾತನಾಡಿ, ‘ವಿವಿಧ ಯೋಜನೆಗಳ ಮೂಲಕ ಮಹಿಳೆಯರು ಸೇರಿದಂತೆ ಎಲ್ಲ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರುತ್ತಿರುವ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಅವರ ಕಾರ್ಯ ಶ್ಲಾಘನೀಯ’ ಎಂದು ಹೇಳಿದರು.
ಮಾಜಿ ಸಚಿವ ಎ.ಬಿ. ಪಾಟೀಲ, ಸಾನ್ನಿಧ್ಯ ವಹಿಸಿದ್ದ ನಿಡಸೋಸಿ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮಾತನಾಡಿದರು. ಬೋರಗಲ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಣುಕಾ ಮಾನೆ ಅಧ್ಯಕ್ಷತೆ ವಹಿಸಿದ್ದರು.
ಚಿಕ್ಕೋಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಧ್ಯಕ್ಷ ವಿಠ್ಠಲ್ ಸಾಲ್ಯಾನ್, ವಿನಯಗೌಡ ಪಾಟೀಲ, ಅಮ್ಮಿನಭಾವಿ ಮಲ್ಲಿಕಾರ್ಜುನ ಸಹಕಾರ ಸಂಘದ ಅಧ್ಯಕ್ಷ ಎಚ್.ಎಂ. ಪಾಟೀಲ, ಪಿಕೆಪಿಎಸ್ ಅಧ್ಯಕ್ಷ ಪರಗೌಡ ಪಾಟೀಲ, ಎಲ್.ಬಿ. ಪಾಟೀಲ, ಯೋಜನಾಧಿಕಾರಿ ವಿನಾಯಕ್ ಕಾಕಂಬಿ, ಎಲಿಮುನ್ನೋಳಿ ವಲಯ ಮೇಲ್ವಿಚಾರಕ ಭಾಸ್ಕರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.