ADVERTISEMENT

ಇತ್ತೀಚೆಗೆ ಬಂದವರಿಗೆ ಮಣೆ: ದೀಪಾ ಕಿಡಿ

​ಪ್ರಜಾವಾಣಿ ವಾರ್ತೆ
Published 17 ಜನವರಿ 2021, 6:04 IST
Last Updated 17 ಜನವರಿ 2021, 6:04 IST
ದೀಪಾ ಕುಡಚಿ
ದೀಪಾ ಕುಡಚಿ   

ಬೆಳಗಾವಿ: ‘ನಗರ ಹಾಗೂ ಜಿಲ್ಲೆಯಲ್ಲಿ ಮೂಲ ಬಿಜೆಪಿಗರನ್ನು ಕಡೆಗಣಿಸಿ ನೆನ್ನೆ, ಮೊನ್ನೆ ಬಂದವರಿಗೆ ಮಣೆ ಹಾಕಲಾಗುತ್ತಿದೆ’ ಎಂದು ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ನಿರ್ದೇಶಕಿ ದೀಪಾ ಕುಡಚಿ ಆರೋಪಿಸಿದರು.

ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿಯಲ್ಲಿ ಮೂಲ‌ ಬಿಜೆಪಿಗರನ್ನು ಕಡೆಗಣಿಸಲಾಗುತ್ತಿದೆ. ಪಕ್ಷಕ್ಕಾಗಿ 20 ವರ್ಷಗಳಿಂದ ದುಡಿದವರಿಗೆ ಮನ್ನಣೆ ದೊರೆಯುತ್ತಿಲ್ಲ. ಗ್ರಾಮೀಣ ಕ್ಷೇತ್ರಕ್ಕೆ ಸಂಬಂಧವೇ ಇಲ್ಲದವರನ್ನು ಖಾನಾಪುರ ಮಹಿಳಾ‌ ಘಟಕದ ಅಧ್ಯಕ್ಷೆಯನ್ನಾಗಿ ಮಾಡಲಾಗಿದೆ. ಈಚೆಗೆ ಬಂದ ಡಾ.ಸೋನಾಲಿ ಸರ್ನೋಬತ್ ಪಕ್ಷದಲ್ಲಿ ಸಾಕಷ್ಟು ಅಧಿಕಾರ ಅನುಭವಿಸುತ್ತಿದ್ದಾರೆ’ ಎಂದು ಕಿಡಿಕಾರಿದರು.

‘ಬಿಜೆಪಿ ಸಮಾವೇಶಕ್ಕೆ ಬರುವ ನಾಯಕರನ್ನು ಆಹ್ವಾನಿಸಲು ವಿಮಾನನಿಲ್ದಾಣದಲ್ಲಿನ ಜವಾಬ್ದಾರಿಯನ್ನು ನನಗೆ ನೀಡಲಾಗಿತ್ತು. ಸೋನಾಲಿ ಮತ್ತು ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ಸಂಜಯ ಪಾಟೀಲ ರಾತ್ರೋರಾತ್ರಿ ಪಟ್ಟಿ ಬದಲಾಯಿಸಿದ್ದಾರೆ. ಈ ಬಗ್ಗೆ ಪಕ್ಷದ ವರಿಷ್ಠರಿಗೆ ದೂರು ನೀಡುತ್ತೇನೆ’ ಎಂದರು.

ADVERTISEMENT

‘ಮುಂಬರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾನೂ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಯಾವ್ಯಾವ ನಾಯಕರನ್ನು ಭೇಟಿಯಾಗಬೇಕೋ ಅವರನ್ನೆಲ್ಲಾ ಭೇಟಿಯಾಗಿ ಮನವಿ ಸಲ್ಲಿಸಿದ್ದೇನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.