ADVERTISEMENT

ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಮನಸ್ಸಿಲ್ಲ: ಪಟ್ಟಣ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2020, 14:59 IST
Last Updated 19 ಅಕ್ಟೋಬರ್ 2020, 14:59 IST
ಅಶೋಕ ಪಟ್ಟಣ
ಅಶೋಕ ಪಟ್ಟಣ   

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಮನಸ್ಸಿಲ್ಲ. ರಾಜ್ಯ ರಾಜಕಾರಣದಲ್ಲಿ ಇರುವುದಕ್ಕೆ ಬಯಸುತ್ತೇನೆ’ ಎಂದು ಕಾಂಗ್ರೆಸ್ ಮುಖಂಡ ಅಶೋಕ ಪಟ್ಟಣ ತಿಳಿಸಿದರು.

ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹೋದ ಚುನಾವಣೆಯಲ್ಲಿ ನನ್ನ ಹೆಸರನ್ನೇ ಅಂತಿಮಗೊಳಿಸಿದ್ದರು. ನಾನು ಬೇಡ ಎಂದಿದ್ದೆ. ಈ ಬಾರಿಯೂ ಪಕ್ಷದ ಬಹಳಷ್ಟು ಮಂದಿ ಕೇಳಿದ್ದಾರೆ. ನನಗೆ ಇಚ್ಛೆ ಇಲ್ಲ ಎಂದು ತಿಳಿಸಿದ್ದೇನೆ. ಪಕ್ಷ ಬಯಸಿದರೆ ಮನವರಿಕೆ ಮಾಡಿಕೊಡುತ್ತೇನೆ’ ಎಂದರು.

‘ಒಮ್ಮೆ ಸಂಸದನಾಗಬೇಕು ಎನ್ನುವ ಆಸೆ ಇದೆ. ಆದರೆ, ಈಗಿನ ಪರಿಸ್ಥಿತಿಯಲ್ಲಿ ಸ್ಪರ್ಧಿಸುವುದಿಲ್ಲ. ಮುಂದೆ ನೋಡೋಣ. ಸೋಲುವ ಭಯದಿಂದೇನೂ ಹಿಂದೆ ಸರಿಯುತ್ತಿಲ್ಲ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

‘ಈ ಸರ್ಕಾರಕ್ಕೆ ಬಡವರ ಬಗ್ಗೆ ಕನಿಕರವಿಲ್ಲ’ ಎಂದು ದೂರಿದರು.

‘ರಾಮದುರ್ಗ ತಾಲ್ಲೂಕಿನಲ್ಲಿ ಪ್ರತಿ ವರ್ಷ ನೆರೆಪೀಡಿತವಾಗುವ ಗ್ರಾಮಗಳನ್ನು ಸ್ಥಳಾಂತರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.