ADVERTISEMENT

‘ನಾನೂ ಆಕಾಂಕ್ಷಿ ಎಂದ ಮೂಲ ಯಾವುದು?’

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2020, 13:06 IST
Last Updated 2 ಡಿಸೆಂಬರ್ 2020, 13:06 IST
ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್
ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್   

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾನೂ ಆಕಾಂಕ್ಷಿ ಅಥವಾ ಅಭ್ಯರ್ಥಿ ಆಗುತ್ತಿದ್ದೇನೆ ಎಂದ ಮೂಲ ಯಾವುದು? ಅದನ್ನು ನಾನೂ ಹುಡುಕುತ್ತಿದ್ದೇನೆ’ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ನಮ್ಮಲ್ಲಿ ಅಭ್ಯರ್ಥಿ ಆಯ್ಕೆ ಕುರಿತು ಚುನಾವಣೆ ಘೋಷಣೆಯಾದ ನಂತರವಷ್ಟೇ ಚರ್ಚೆ ನಡೆಯುತ್ತದೆ. ಡಿ.4ರಂದು ಪಕ್ಷದ ವಿಶೇಷ ಸಮನ್ವಯ ಸಮಿತಿ ಸಭೆ ನಡೆಯಲಿದ್ದು, ಅಲ್ಲಿ ಚರ್ಚೆಯಾಗುವುದಿಲ್ಲ. ಚುನಾವಣೆ ಘೋಷಣೆ ಆಗದಿರುವುದು ಇದಕ್ಕೆ ಕಾರಣ. ವದಂತಿಗಳಿಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ’ ಎಂದರು.

‘ಸಂಪುಟ ವಿಸ್ತರಣೆ ಮುಖ್ಯಮಂತ್ರಿಗೆ ಬಿಟ್ಟ ವಿಚಾರ. ವರಿಷ್ಠರೊಂದಿಗೆ ಚರ್ಚಿಸಿ ತೀರ್ಮಾನ ಮಾಡುತ್ತಾರೆ. ಯಾರದ್ದೇ ವೈಯಕ್ತಿಕ ಅಭಿಪ್ರಾಯದ ಬಗ್ಗೆ ನಾನು ಚರ್ಚೆ ಮಾಡುವುದಿಲ್ಲ. ಪಕ್ಷದಲ್ಲಿ ಯಾರಿಗೇ ಸಮಸ್ಯೆ ಇದ್ದರೂ, ರಾಜ್ಯ ಘಟಕದ ಅಧ್ಯಕ್ಷರೊಂದಿಗೆ ನಾಲ್ಕು ಗೋಡೆಯೊಳಗೆ ಕುಳಿತು ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಸಾರ್ವಜನಿಕವಾಗಿ‌ ಮಾತನಾಡುವುದು ಸರಿಯಲ್ಲ. ಎ.ಎಚ್. ವಿಶ್ವನಾಥ್ ಅವರೊಂದಿಗೆ ಇಡೀ ಪಕ್ಷ ನಿಲ್ಲಲಿದೆ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.