
ಕಾಗವಾಡ: ‘2028ಕ್ಕೆ ಕಾಗವಾಡ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ, ಕಾರ್ಯಕರ್ತರು ಉಹಾಪೋಹಗಳಿಗೆ ಕಿವಿಗೊಡಬೇಡಿ’ ಎಂದು ಶಾಸಕ ರಾಜು ಕಾಗೆ ಸ್ಪಷ್ಟಪಡಿಸಿದರು.
ಕಾಗವಾಡ ತಾಲ್ಲೂಕಿನ ಮೋಳೆ ಗ್ರಾಮದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು, ಅಭ್ಯಂತರವಿಲ್ಲ. ಆದರೆ ಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಗವಾಡ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾನೇ ಸ್ಪರ್ಧೆ ಮಾಡುತ್ತೇನೆ. ಕಾರ್ಯಕರ್ತರಲ್ಲಿ ಯಾವುದೇ ಗೊಂದಲ ಬೇಡ ಎಂದರು.
ನನ್ನ ಆರೋಗ್ಯ ಸರಿ ಇಲ್ಲ, ಚುನಾವಣೆಯಲ್ಲಿ ಸ್ಷರ್ಧಿಸುದಿಲ್ಲ ಎಂದು ಕೆಲವು ಕಡೆ ಚರ್ಚೆ ನಡೆಯುತ್ತಿವೆ, ಕೆಲವರು ನಾನೇ ಮುಂದಿನ ಕಾಗವಾಡ ಶಾಸಕ ಅಂತ ಹೇಳುತ್ತಿದ್ದಾರೆ ಎನ್ನುವುದು ನನ್ನ ಗಮನಕ್ಕಿದೆ. ನಾನು ಸಂಪೂರ್ಣ ಫಿಟ್ ಆಗಿದ್ದೇನೆ ,ನನಗೆ ಈಗ ಸ್ವಲ್ಪ ಕಾಲು ನೋವಿದೆ, ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಖಚಿತ. ಆರೋಗ್ಯ ಸರಿ ಇಲ್ಲ ಎಂದರೆ ನನಗೇನು ಕ್ಯಾನ್ಸರ್ ಆಗಿದೆಯಾ? ಎಂದು ಪ್ರಶ್ನಿಸಿ ಇಂಥಹ ಊಹಾಪೊಹಗಳಿಗೆ ಕಾರ್ಯಕರ್ತರು ಕಿವಿಗೊಡಬಾರದು. 5 ಬಾರಿ ಶಾಸಕನಾಗಿ ಹಲವಾರು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದೇನೆ, 6ನೇ ಬಾರಿಗೂ ನಾನೇ ಶಾಸಕನಾಗುತ್ತೇನೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.