ADVERTISEMENT

‘ಜಿಲ್ಲೆಯ ಯಾವ ಸಚಿವರನ್ನು ಕೈಬಿಟ್ಟರೂ ಆಕ್ಷೇಪವಿಲ್ಲ’

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2020, 13:47 IST
Last Updated 4 ಅಕ್ಟೋಬರ್ 2020, 13:47 IST

ಬೆಳಗಾವಿ: ‘ಸಚಿವ ಸಂಪುಟ ವಿಸ್ತರಣೆ ವೇಳೆ ಜಿಲ್ಲೆಯ ಯಾರನ್ನೇ ಕೈಬಿಟ್ಟರೂ ನನಗೆ ಆಕ್ಷೇಪವಿಲ್ಲ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

‘ಸಂಪುಟ ವಿಸ್ತರಣೆ ಅಥವಾ ಪುನರ್‌ರಚನೆ ವಿಷಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಬದ್ಧವಾಗಿರಲಿದ್ದೇನೆ. ಪಕ್ಷದಲ್ಲಿ ಉಂಟಾಗಲಿರುವ ಬಿರುಕುಗಳನ್ನು ತಪ್ಪಿಸಲು ವರಿಷ್ಠರು ಈ ಬಾರಿ ಕೆಲ ನಾಯಕರಿಗೆ ಅವಕಾಶ ಕಲ್ಪಿಸುವ ವಿಶ್ವಾಸವಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.