ADVERTISEMENT

ಮುಖ್ಯಮಂತ್ರಿಗೆ ಆಭಾರಿಯಾಗಿದ್ದೇನೆ: ರಮೇಶ

​ಪ್ರಜಾವಾಣಿ ವಾರ್ತೆ
Published 2 ಜೂನ್ 2020, 12:23 IST
Last Updated 2 ಜೂನ್ 2020, 12:23 IST

ಬೆಳಗಾವಿ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನನ್ನ ಮೇಲೆ ಸಂಪೂರ್ಣ ವಿಶ್ವಾಸ ಇಟ್ಟು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿರುವುದಕ್ಕೆ ಅವರಿಗೆ ಆಭಾರಿಯಾಗಿದ್ದೇನೆ. ಜಿಲ್ಲೆಯ ಎಲ್ಲ ಶಾಸಕರ ಸಹಕಾರ ಪಡೆದು ಮುಕ್ತ ಮನಸ್ಸಿನಿಂದ ಅಭಿವೃದ್ಧಿಗೆ ಶ್ರಮಿಸುತ್ತೇನೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

‘ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಸಚಿವ ಸಂಪುಟದ ಸಹೋದ್ಯೋಗಿಗಳು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಚಿರಋಣಿಯಾಗಿರುತ್ತೇನೆ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT