ಬೆಳಗಾವಿ: ‘ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸಲ್ಲಿಸಿರುವ ನಾಮಪತ್ರ ವಾಪಸ್ ಪಡೆಯುವುದಿಲ್ಲ’ ಎಂದು ಖಾನಾಪುರ ಕಾಂಗ್ರೆಸ್ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ತಿಳಿಸಿದರು.
ಇಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಹಕಾರ ಸಂಘದಲ್ಲಿ ಮೊದಲ ಬಾರಿಗೆ ಚುನಾವಣೆಗೆ ನಿಂತಿದ್ದೇನೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸ್ಪರ್ಧೆಗಿಳಿದಿದ್ದೇನೆ. ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯುವುದಿಲ್ಲ’ ಎಂದರು.
‘ಕ್ಷೇತ್ರದ ಕಾಂಗ್ರೆಸ್, ಬಿಜೆಪಿ, ಎಂಇಎಸ್ ನಾಯಕರ ಜೊತೆಯೂ ಚರ್ಚಿಸಿದ್ದೇನೆ. ರೈತರ ಪರ ಕೆಲಸ ಮಾಡಿ ಸಹಕಾರಿ ಸಂಘಗಳಿಗೆ ಹೆಚ್ಚಿನ ಅನುದಾನ ತರುವ ಉದ್ದೇಶ ನನ್ನದು. ರಮೇಶ್ ಕತ್ತಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದರಿಂದ ಅವರಿಂದಲೂ ಸಲಹೆ ಕೇಳಿದ್ದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.