ಬೆಳಗಾವಿ: ‘ವೀರ ರಾಣಿ ಕಿತ್ತೂರು ಚನ್ನಮ್ಮನ ನಾಡು ಪ್ರತಿನಿಧಿಸುವ ನನಗೆ ಸಿಕ್ಕ ಅವಕಾಶವನ್ನು ಜನಸೇವೆಗಾಗಿ ಬಳಸಿಕೊಳ್ಳುವೆ’ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ನಗರದ ಆರ್.ಪಿ.ಡಿ. ವೃತ್ತದಲ್ಲಿರುವ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಕಚೇರಿಗೆ ಶುಕ್ರವಾರ ಭೇಟಿ ನೀಡಿ, ಮುಖಂಡರಿಂದ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು.
‘ಜನರ ಆಶೀರ್ವಾದ ಮತ್ತು ಪಕ್ಷದ ಕಾರ್ಯಕರ್ತರ ಪರಿಶ್ರಮದಿಂದ ಜನರ ಸೇವೆ ಮಾಡಲು ಹಾಗೂ ಮತ್ತೊಮ್ಮೆ ಮಂತ್ರಿಯಾಗಲು ಸಾಧ್ಯವಾಗಿದೆ. ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ವಹಿಸುವ ಯಾವುದೇ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುವೆ’ ಎಂದರು.
ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ ಮಾತನಾಡಿದರು.
ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಘಟಕದ ಉಪಾಧ್ಯಕ್ಷ ಯುವರಾಜ ಜಾಧವ, ಪ್ರಧಾನ ಕಾರ್ಯದರ್ಶಿ ಸಂದೀಪ ದೇಶಪಾಂಡೆ, ಖಜಾಂಚಿ ಮಲ್ಲಿಕಾರ್ಜುನ ಮಾದಮ್ಮನವರ, ಮಾಧ್ಯಮ ಸಂಚಾಲಕ ಎಫ್.ಎಸ್. ಸಿದ್ದನಗೌಡರ, ವಕ್ತಾರ ಸಂಜಯ ಕಂಚಿ, ಸಾಮಾಜಿಕ ಜಾಲತಾಣದ ಸಂಚಾಲಕ ನಿತಿನ ಚೌಗಲೆ, ಸಂತೋಷ ದೇಶನೂರ, ಕಾರ್ಯಾಲಯ ಕಾರ್ಯದರ್ಶಿ ವೀರಭದ್ರಯ್ಯ ಪೂಜಾರ, ಡಾ.ಸೋನಾಲಿ ಸರ್ನೋಬತ್, ಶಿಲ್ಪಾ ಗೋಡಿಗೌಡರ, ಶಾಂತಾ ಮಡ್ಡಿಕರ, ಯಲ್ಲೇಶ ಕೋಲಕಾರ, ಚೇತನಾ ಅಗಸಿಕರ, ಪ್ರಿಯಾಂಕಾ ಅಜ್ರೇಕಾರ, ಶ್ವೇತಾ ಜಗದಾಳೆ, ಅಭಯ ಅವಲಕ್ಕಿ, ಸುದರ್ಶನ ಪಾಟೀಲ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.