ADVERTISEMENT

ಒಪಿಡಿ ಬಂದ್ ಮಾಡಿ ಖಾಸಗಿ ವೈದ್ಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2021, 15:06 IST
Last Updated 2 ಮಾರ್ಚ್ 2021, 15:06 IST
ಬೆಳಗಾವಿಯಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರ ಮೇಲೆ ಹಲ್ಲೆ ಖಂಡಿಸಿ ಐಎಂಎ ಜಿಲ್ಲಾ ಘಟಕದ ನೇತೃತ್ವದಲ್ಲಿ ಖಾಸಗಿ ವೈದ್ಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು
ಬೆಳಗಾವಿಯಲ್ಲಿ ಖಾಸಗಿ ಆಸ್ಪತ್ರೆಯ ವೈದ್ಯರ ಮೇಲೆ ಹಲ್ಲೆ ಖಂಡಿಸಿ ಐಎಂಎ ಜಿಲ್ಲಾ ಘಟಕದ ನೇತೃತ್ವದಲ್ಲಿ ಖಾಸಗಿ ವೈದ್ಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು   

ಬೆಳಗಾವಿ: ಖಾಸಗಿ ಆಸ್ಪತ್ರೆಯ ವೈದ್ಯರ ಮೇಲೆ ಹಲ್ಲೆ ಖಂಡಿಸಿ ಐಎಂಎ ಜಿಲ್ಲಾ ಘಟಕದ ನೇತೃತ್ವದಲ್ಲಿ ಖಾಸಗಿ ವೈದ್ಯರು ತಮ್ಮ ಆಸ್ಪತ್ರೆಗಳಲ್ಲಿ ಒಪಿಡಿ (ಹೊರ ರೋಗಿಗಳ ವಿಭಾಗ) ಬಂದ್ ಮಾಡಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಸ್ಪತ್ರೆ ಆವರಣದ ಐಎಂಎ ಸಭಾಂಗಣ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರಗೆ ಮೆರವಣಿಗೆಯಲ್ಲಿ ಬಂದರು.

‘ನಗರದ ಖಾಸಗಿ ಆಸ್ಪತ್ರೆಯ ಡಾ.ರೋಹಿತ ಜೋಶಿ ಅವರ ಮೇಲೆ ರೋಗಿಯ ಸಂಬಂಧಿಕರು ಹಲ್ಲೆ ನಡೆಸಿದ್ದಾರೆ. ಚಿಕಿತ್ಸೆಯಲ್ಲಿ ಲೋಪ ಕಂಡುಬಂದಿಲ್ಲ’ ಎಂದು ತಿಳಿಸಿದರು.

ADVERTISEMENT

‘ವೈದ್ಯರ ಮೇಲೆ ಹಲ್ಲೆ ಪ್ರಕರಣಗಳು ಮರುಕಳಿಸದಂತೆ ನೋಡಿಕೊಳ್ಳಬೇಕು’ ಎಂದು ಆಗ್ರಹಿಸಿದರು. ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು. ಘಟಕದ ಅಧ್ಯಕ್ಷ ಡಾ.ಅನಿಲ ಬಿ. ಪಾಟೀಲ ನೇತೃತ್ವ ವಹಿಸಿದ್ದರು.

‘ಖಾಸಗಿ ಆಸ್ಪತ್ರೆಗಳ ಒಪಿಡಿಗಳು ಬಂದ್ ಆಗಿದ್ದರಿಂದ ರೋಗಿಗಳಿಗೆ ಯಾವುದೇ ತೊಂದರೆಯಾಗಲಿಲ್ಲ. ಅವರು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರು’ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.