ಖಾನಾಪುರ: ಪಟ್ಟಣದ ಹೊರವಲಯದ ರುಮೇವಾಡಿ ಗ್ರಾಮದ ಬಳಿ ನೂತನವಾಗಿ ನಿರ್ಮಿಸಲಾದ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯ ಅಧಿಕಾರಿಗಳ ನೂತನ ಕಟ್ಟಡವನ್ನು ಶಾಸಕ ವಿಠ್ಠಲ ಹಲಗೇಕರ ಈಚೆಗೆ ಲೋಕಾರ್ಪಣೆಗೊಳಿಸಿದರು.
ಬಳಿಕ ಮಾತನಾಡಿದ ಅವರು ‘ಸಾಮಾಜಿಕ ಅರಣ್ಯ ಇಲಾಖೆಯ ಕಚೇರಿಯ ಕಟ್ಟಡ ಮಲಪ್ರಭಾ ನದಿ ತೀರದಲ್ಲಿ ಶಿಥಿಲಾವಸ್ಥೆಯಲ್ಲಿತ್ತು. ಹೀಗಾಗಿ ಕಳೆದ ವರ್ಷ ₹30 ಲಕ್ಷ ಮೊತ್ತದ ವಿಶೇಷ ಅನುದಾನದಲ್ಲಿ ಈ ಕಚೇರಿಯ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದೆ. ಈ ಕಟ್ಟಡದ ಸದುಪಯೋಗವಾಗಬೇಕು’ ಎಂದರು.
ವಲಯ ಅರಣ್ಯಾಧಿಕಾರಿ ಮೃತ್ಯುಂಜಯ ಗಣಾಚಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಖೇಮಸಿಂಗ್ ರಾಠೋಡ ಸಾಮಾಜಿಕ ಅರಣ್ಯ ಇಲಾಖೆಯ ಯೋಜನೆಗಳ ಬಗ್ಗೆ ವಿವರಿಸಿದರು. ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಶಾಸಕರನ್ನು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳನ್ನು ಸತ್ಕರಿಸಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಸ್ ಗೊರವರ ಅಧ್ಯಕ್ಷತೆ ವಹಿಸಿದ್ದರು. ವಲಯ ಅರಣ್ಯಾಧಿಕಾರಿ ಶ್ರೀಕಾಂತ ಪಾಟೀಲ, ಗಿರೀಶ ಇಟಗಿ, ಉಪ ವಲಯ ಅರಣ್ಯಾಧಿಕಾರಿಗಳಾದ ಅಶೋಕ ಹೂಲಿ, ಅಕ್ಬರ ಅತ್ತಾರ, ಮಹಾಂತೇಶ ಮುರಗೋಡ, ತಾಂತ್ರಿಕ ಸಹಾಯಕ ಶಶಿಧರ ಸತ್ತಿಗೇರಿ, ಡಿಇಒ ಮಹಾಂತೇಶ ಬಾಳೇಕುಂದ್ರಿ, ಅಮರ ಕುಲಕರ್ಣಿ, ಈರಣ್ಣ ಕರಲಿಂಗನವರ, ಪಿಡಿಒ ದೇವರಾಜ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ, ಸ್ಥಳೀಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.