ADVERTISEMENT

ಬೆಳಗಾವಿ: ಕೃಷ್ಣೆಗೆ 1.56 ಲಕ್ಷ ಕ್ಯುಸೆಕ್ ನೀರು, ಪ್ರವಾಹ ಭೀತಿ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 23 ಜುಲೈ 2021, 6:43 IST
Last Updated 23 ಜುಲೈ 2021, 6:43 IST
ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲ್ಲೂಕಿನ ಯಮಗರ್ಣಿ ಬಳಿ ವೇದಗಂಗಾ ನದಿ ಪ್ರವಾಹದಿಂದ ರಸ್ತೆ ಜಲಾವೃತವಾಗಿದ್ದು, ಲಾರಿಯೊಂದು ಸಿಲುಕಿದೆ
ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲ್ಲೂಕಿನ ಯಮಗರ್ಣಿ ಬಳಿ ವೇದಗಂಗಾ ನದಿ ಪ್ರವಾಹದಿಂದ ರಸ್ತೆ ಜಲಾವೃತವಾಗಿದ್ದು, ಲಾರಿಯೊಂದು ಸಿಲುಕಿದೆ   

ಬೆಳಗಾವಿ: ನೆರೆಯ ಮಹಾರಾಷ್ಟ್ರದ ಕೊಂಕಣ ಪ್ರದೇಶ ಮತ್ತು ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ನದಿ ಜಲಾನಯನ ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಕೃಷ್ಣಾ ನದಿಗೆ 1.56 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಇದರೊಂದಿಗೆ ತೀರದಲ್ಲಿ ಪ್ರವಾಹ ಭೀತಿಯೂ ಹೆಚ್ಚಾಗ ತೊಡಗಿದೆ.

ಚಿಕ್ಕೋಡಿ ತಾಲ್ಲೂಕಿನಲ್ಲಿ ದೂಧಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸದಲಗಾ-ಬೋರಗಾಂವ ಸೇತುವೆ ಮುಳುಗಡೆಯಾಗಿದೆ. ಕೊಯ್ನಾ ಜಲಾಶಯದಿಂದ ಹೊರಬಿಡಲಾದ 10ಸಾವಿರ ಕ್ಯುಸೆಕ್, ದೂಧ್‌ಗಂಗಾ ನದಿಯಿಂದ 34,320 ಕ್ಯುಸೆಕ್ ಮತ್ತುಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ ಬರುತ್ತಿರುವ 1.21 ಲಕ್ಷ ಕ್ಯುಸೆಕ್ ಸೇರಿ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ 1.56 ಲಕ್ಷ ಕ್ಯುಸೆಕ್ ನೀರು ಸೇರುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.