ADVERTISEMENT

ಬೆಳಗಾವಿ: ಸ್ವಾತಂತ್ರ್ಯಮಹೋತ್ಸವ ಸರಳ ಆಚರಣೆ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2021, 7:19 IST
Last Updated 15 ಆಗಸ್ಟ್ 2021, 7:19 IST
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಧ್ವಜಾರೋಹಣ ನೆರವೇರಿಸಿದರು
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಧ್ವಜಾರೋಹಣ ನೆರವೇರಿಸಿದರು   

ಬೆಳಗಾವಿ: ಸ್ವಾತಂತ್ರ್ಯ ಮಹೋತ್ಸವವನ್ನು ಜಿಲ್ಲೆಯಾದ್ಯಂತ ಸರಳವಾಗಿ ಭಾನುವಾರ ಆಚರಿಸಲಾಯಿತು.

ಜಿಲ್ಲಾಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಇಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಉತ್ಸವ ನೆರವೇರಿತು. ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಹಾಗೂ ಎಸ್ಪಿ ಲಕ್ಷ್ಮಣ ನಿಂಬರಗಿ ಹಾಜರಿದ್ದರು.

ADVERTISEMENT

ಇದಕ್ಕೂ ಮುನ್ನ ಸುವರ್ಣ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಧ್ವಜಾರೋಹಣ ನೆರವೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.