ADVERTISEMENT

ಬೆಳಗಾವಿ: ಸ್ವಾತಂತ್ರ್ಯೋತ್ಸವದಲ್ಲಿ ಪೌರಕಾರ್ಮಿಕರ ‘ಪಥಸಂಚಲನ’

ಇಮಾಮ್‌ಹುಸೇನ್‌ ಗೂಡುನವರ
Published 14 ಆಗಸ್ಟ್ 2025, 23:32 IST
Last Updated 14 ಆಗಸ್ಟ್ 2025, 23:32 IST
<div class="paragraphs"><p>ಬೆಳಗಾವಿ ಮಹಾನಗರ ಪಾಲಿಕೆ ಆವರಣದಲ್ಲಿ ಪೌರ ಕಾರ್ಮಿಕರು ಪಥಸಂಚಲನದ ತಾಲೀಮಿನಲ್ಲಿ ಪಾಲ್ಗೊಂಡಿರುವುದು. </p></div>

ಬೆಳಗಾವಿ ಮಹಾನಗರ ಪಾಲಿಕೆ ಆವರಣದಲ್ಲಿ ಪೌರ ಕಾರ್ಮಿಕರು ಪಥಸಂಚಲನದ ತಾಲೀಮಿನಲ್ಲಿ ಪಾಲ್ಗೊಂಡಿರುವುದು.

   

ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ

ಬೆಳಗಾವಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬೆಳಗಾವಿಯಲ್ಲಿ ಶುಕ್ರವಾರ ನಡೆಯುವ ಪಥಸಂಚಲನದಲ್ಲಿ ಪಾಲ್ಗೊಳ್ಳಲು ಈ ಬಾರಿ ಪೌರಕಾರ್ಮಿಕರಿಗೆ ಅವಕಾಶ ಲಭಿಸಿದೆ. ವಿಶಿಷ್ಟವಾದ ಸಮವಸ್ತ್ರ ಧರಿಸಿ, ಪಥಸಂಚಲನದ ಮೂಲಕ ರಾಷ್ಟ್ರಧ್ವಜಕ್ಕೆ ವಂದನೆ ಸಲ್ಲಿಸುವರು.

ADVERTISEMENT

ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 1,677 ಪೌರಕಾರ್ಮಿಕರು ಇದ್ದಾರೆ. ಅವರಲ್ಲಿ 339 ಜನರ ಸೇವೆ ಕಾಯಂ ಆಗಿದ್ದರೆ, 280 ಮಂದಿ ನೇರ ವೇತನ ಯೋಜನೆಯಡಿ ಒಳಪಟ್ಟಿದ್ದಾರೆ. 1,058 ಮಂದಿ ಹೊರಗುತ್ತಿಗೆ ಪದ್ಧತಿಯಡಿ ಕೆಲಸ ಮಾಡುತ್ತಾರೆ. 

ಶುಕ್ರವಾರ ಬೆಳಿಗ್ಗೆ 7.30ಕ್ಕೆ ಮಹಾನಗರ ಪಾಲಿಕೆ ಆವರಣದಲ್ಲಿ ಮತ್ತು ಬೆಳಿಗ್ಗೆ 9ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಎರಡೂ ಕಡೆಯ ಪಥಸಂಚಲನದಲ್ಲಿ ಪಾಲ್ಗೊಳ್ಳಲು 12 ಮಹಿಳೆಯರು ಸೇರಿ 33 ಮಂದಿ ಪೌರಕಾರ್ಮಿಕರು ಆಯ್ಕೆ ಆಗಿದ್ದಾರೆ.

‘ಸಂಭ್ರಮದಲ್ಲಿರುವ ಪೌರಕಾರ್ಮಿಕರು ದೈನಂದಿನ ಕೆಲಸದ ಜೊತೆಯಲ್ಲೇ ಎಂಟು ದಿನಗಳಿಂದ ಪಥಸಂಚಲನಕ್ಕೆ ತಾಲೀಮು ನಡೆಸಿದ್ದಾರೆ. ಅವರಿಗೆ ಸೇನೆ ಮತ್ತು ಪೊಲೀಸ್ ಅಧಿಕಾರಿಗಳು ಅಗತ್ಯ ಮಾರ್ಗದರ್ಶನ ನೀಡಿದ್ದಾರೆ’ ಎಂದು ಪಾಲಿಕೆ ಪರಿಸರ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಹನಮಂತ ಕಲಾದಗಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ನಮಗೆ ಸ್ವಚ್ಛತೆ ಕೆಲಸ ಬಿಟ್ಟರೆ ಬೇರೆ ಗೊತ್ತಿರಲಿಲ್ಲ. ವಾರ್ಷಿಕ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುತ್ತಿದ್ದೆವು. ಪಥಸಂಚಲನಕ್ಕೆ ಆಯ್ಕೆ ಆಗಿರುವುದು ನಮ್ಮಲ್ಲಿ ಹುಮ್ಮಸ್ಸು ತಂದಿದೆ’ ಎಂದು ಪೌರ ಕಾರ್ಮಿಕ ಆನಂದ ಪಿಪ್ರೆ ತಿಳಿಸಿದರು.

ಬೆಳಗಾವಿ ಮಹಾನಗರ ಪಾಲಿಕೆ ಆವರಣದಲ್ಲಿ ಪೌರ ಕಾರ್ಮಿಕರು ಪಥಸಂಚಲನದ ತಾಲೀಮಿನಲ್ಲಿ ಪಾಲ್ಗೊಂಡಿರುವುದು. ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ
ಬಿ.ಶುಭ
ಪೌರಕಾರ್ಮಿಕರು ಸ್ವಚ್ಛತೆ ಕೆಲಸಕ್ಕಷ್ಟೇ ಸೀಮಿತರಲ್ಲ. ಅವರಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಈ ನಿರ್ಧಾರ ಕೈಗೊಂಡಿದ್ದೇವೆ.
ಬಿ.ಶುಭ ಆಯುಕ್ತೆ ಬೆಳಗಾವಿ ಮಹಾನಗರ ಪಾಲಿಕೆ
ಓಂಕಾರ ಅಪ್ಟೇಕರ
ನಾನು ಶಾಲಾ ಹಂತದಲ್ಲಿ ಪಥಸಂಚಲನದಲ್ಲಿ ಪಾಲ್ಗೊಂಡಿದ್ದೆ. ಈಗ ಸ್ವಾತಂತ್ರ್ಯ ದಿನಾಚರಣೆ ವೇಳೆ ಪಥಸಂಚಲನದಲ್ಲಿ ಭಾಗವಹಿಸುತ್ತಿರುವುದು ಖುಷಿ ತಂದಿದೆ
ಓಂಕಾರ ಅಪ್ಟೇಕರ ಪೌರ ಕಾರ್ಮಿಕ
ರೇಣುಕಾ ಕಾಂಬಳೆ
ಜೀವನದಲ್ಲೇ ಮೊದಲ ಸಲ ಪಥಸಂಚಲನದಲ್ಲಿ ಪಾಲ್ಗೊಳ್ಳುತ್ತಿದ್ದೇನೆ. ಪೌರ ಕಾರ್ಮಿಕರಿಗೆ ಅವಕಾಶ ಸಿಕ್ಕಿದ್ದಕ್ಕೆ ಖುಷಿಯಾಗಿದೆ
ರೇಣುಕಾ ಕಾಂಬಳೆ ಪೌರ ಕಾರ್ಮಿಕ ಮಹಿಳೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.