ಬೆಳಗಾವಿ: ವಿವಿಧ ಇಲಾಖೆಯ ಕಾಮಗಾರಿಗಳ ಪ್ಯಾಕೇಜ್ ಟೆಂಡರ್‌ಗಳನ್ನು ಪ್ರತ್ಯೇಕವಾಗಿ ಕರೆಯಬೇಕು ಎಂದು ಒತ್ತಾಯಿಸಿ ಎಸ್ಸಿ–ಎಸ್ಟಿ ಗುತ್ತಿಗೆದಾರರ ಸಂಘದ ಜಿಲ್ಲಾ ಘಟಕದ ಸದಸ್ಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
‘ಸಂಘದ ಅಧ್ಯಕ್ಷ ಅಶೋಕ ಮಮದಾಪುರ ಮಾತನಾಡಿ, ‘ಬೆಳಗಾವಿ ಹಾಗೂ ಚಿಕ್ಕೋಡಿ ವಿಭಾಗಗಳಲ್ಲಿ ವಿವಿಧ ಕಾಮಗಾರಿಗಳನ್ನು ಕ್ರೋಡಿಕರಿಸಿ ಪ್ಯಾಕೇಜ್ ರೂಪದಲ್ಲಿ ಆಹ್ವಾನಿಸಲಾಗುತ್ತಿದೆ. ಇದರಿಂದ ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೆ ಯಾವುದೇ ಟೆಂಡರ್‌ಗಳು ಸಿಗುತ್ತಿಲ್ಲ. ಹೀಗಾಗಿ, ಮೊದಲಿನ ರೀತಿಯಲ್ಲಿಯೇ ಟೆಂಡರ್‌ಗಳನ್ನು ಪ್ರತ್ಯೇಕವಾಗಿಯೇ ಕರೆಯಬೇಕು’ ಎಂದು ಆಗ್ರಹಿಸಿದರು.
‘ಎಸ್ಸಿ, ಎಸ್ಟಿ ಗುತ್ತಿಗೆದಾರರಿಗೆ ಟೆಂಡರ್‌ಗಳಲ್ಲಿ ಮೀಸಲಾತಿ ಕಲ್ಪಿಸಬೇಕೆಂಬ ನಿಯಮವನ್ನು ಅಧಿಕಾರಿಗಳು ಪಾಲಿಸಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಸಿದರು. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಉಪಾಧ್ಯಕ್ಷ ಶಿವಪ್ಪ ತಳವಾರ, ಸದಸ್ಯರಾದ ರಾಜು ಜಾಂಗಟಿ, ಲಕ್ಷ್ಮಣ ಹುಲೆಪ್ಪುರಕರ, ಮಾರುತಿ ಕಲ್ಲವಡ್ಡರ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.