ADVERTISEMENT

ಗೋಹತ್ಯೆ ನಿಷೇಧ ಕಾನೂನು ಜಾರಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 21 ಜುಲೈ 2019, 15:46 IST
Last Updated 21 ಜುಲೈ 2019, 15:46 IST
ಗೋವುಗಳ ರಕ್ಷಣೆಗೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ರಾಷ್ಟ್ರೀಯ ಹಿಂದೂ ಆಂದೋಲನ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರು ಬೆಳಗಾವಿಯಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು
ಗೋವುಗಳ ರಕ್ಷಣೆಗೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ರಾಷ್ಟ್ರೀಯ ಹಿಂದೂ ಆಂದೋಲನ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರು ಬೆಳಗಾವಿಯಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು   

ಬೆಳಗಾವಿ: ಗೋಹತ್ಯೆನಿಷೇಧ ಕಾನೂನು ಜಾರಿಗೆ ಆಗ್ರಹಿಸಿ ರಾಷ್ಟ್ರೀಯ ಹಿಂದೂ ಆಂದೋಲನ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರು ಇಲ್ಲಿನ ಸಂಭಾಜಿ ವೃತ್ತದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.

‘ಗೋಹತ್ಯೆ, ಕಳ್ಳ ಸಾಗಣೆ ಹಾಗೂ ಗೋರಕ್ಷಕರ ಮೇಲೆ ಹಲ್ಲೆಯಂತಹ ಘಟನೆಗಳು ಪದೇಪದೇ ನಡೆಯುತ್ತಿವೆ. ಗೋರಕ್ಷಕರ ಮೇಲೆ ಹಲ್ಲೆ ಮಾಡುವ ಆರೋಪಿಗಳ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು. ಕಸಾಯಿಖಾನೆಗಳನ್ನು ಮುಚ್ಚಿಸಬೇಕು. ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರಬೇಕು’ ಎಂದು ಒತ್ತಾಯಿಸಿದರು.

ಪ್ರಕರಣ ಹಿಂಪಡೆಯಲು ಆಗ್ರಹ: ‘ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣದಲ್ಲಿ ಮುಂಬೈನ ವಕೀಲ ಸಂಜೀವ ಪುನಾಳೆಕರ ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತ ವಿಕ್ರಮ್ ಭಾವೆ ಅವರ ಮೇಲೆ ದಾಖಲಿಸಿರುವ ಪ್ರಕರಣವನ್ನು ಹಿಂಪಡೆಯಬೇಕು. ಹತ್ಯೆ ಪ್ರಕರಣದಲ್ಲಿ ಅನಗತ್ಯವಾಗಿ ಹಿಂದೂ ಸಂಘಟನೆಗಳ ಮುಖಂಡರನ್ನು ಬಂಧಿಸುವುದನ್ನು ನಿಲ್ಲಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

ಲಾಲ್‌ ಕಫ್ತಾನ ಚಿತ್ರ ನಿಷೇಧಿಸಿ: ‘ಬಾಲಿವುಡ್‌ನ ‘ಲಾಲ್‌ ಕಫ್ತಾನ್’ ಚಿತ್ರದಲ್ಲಿ ನಾಗಾಸಾಧುಗಳನ್ನು ಅವಮಾನಿಸುವ ರೀತಿಯಲ್ಲಿ ಚಿತ್ರೀಕರಿಸಲಾಗಿದೆ. ಚಿತ್ರದ ಫೋಸ್ಟರ್‌ಗಳಲ್ಲಿ ಹಾಗೂ ವಿಡಿಯೋಗಳಲ್ಲಿ ನಾಗಾಸಾಧುಗಳನ್ನು ಅವಮಾನಿಸಿರುವುದು ಕಂಡುಬರುತ್ತಿದೆ. ಹೀಗಾಗಿ, ಚಿತ್ರದ ಬಿಡುಗಡೆಗೆ ಅವಕಾಶ ನೀಡದೇ, ನಿಷೇಧ ಹೇರಬೇಕು’ ಎಂದು ಒತ್ತಾಯಿಸಿದರು.

ಮುಖಂಡರಾದ ಪಂಕಜ ಘಾಡಿ, ಮಾರುತಿ ಸುತಾರ, ವಿಜಯ ನಂದಗಡಕರ, ಸದಾನಂದ ಮಾಶೇಕರ, ವಿಜಯ ಭೋಸಲೆ, ಗಜಾನಂದ ಕಾರೆಕರ, ಅರ್ಚನಾ ಲಿಮೆಯೇ,ಸುಧೀರ ಹಿರೇಕರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.