ADVERTISEMENT

ಇವಿಎಂ ಬಳಕೆ ನಿಲ್ಲಿಸುವಂತೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 17 ಜೂನ್ 2019, 11:19 IST
Last Updated 17 ಜೂನ್ 2019, 11:19 IST
ಮುಂದಿನ ಎಲ್ಲ ಚುನಾವಣೆಗಳಿಗೆ ಇವಿಎಂ ಬ್ಯಾನ್ ಮಾಡಿ ಬ್ಯಾಲೆಟ್ ಪೇಪರ್ ಮೂಲಕವೇ ಚುನಾವಣೆ ನಡೆಸಬೇಕೆಂದು ಆಗ್ರಹಿಸಿ‌ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು ಸೋಮವಾರ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು
ಮುಂದಿನ ಎಲ್ಲ ಚುನಾವಣೆಗಳಿಗೆ ಇವಿಎಂ ಬ್ಯಾನ್ ಮಾಡಿ ಬ್ಯಾಲೆಟ್ ಪೇಪರ್ ಮೂಲಕವೇ ಚುನಾವಣೆ ನಡೆಸಬೇಕೆಂದು ಆಗ್ರಹಿಸಿ‌ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು ಸೋಮವಾರ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು   

ಬೆಳಗಾವಿ: ಮುಂದಿನ ಎಲ್ಲ ಚುನಾವಣೆಗಳಿಗೆ ಇವಿಎಂ ಬ್ಯಾನ್ ಮಾಡಿ ಬ್ಯಾಲೆಟ್ ಪೇಪರ್ ಮೂಲಕವೇ ಚುನಾವಣೆ ನಡೆಸಬೇಕೆಂದು ಆಗ್ರಹಿಸಿ‌ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು ಸೋಮವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ಮಾಡಿದರು.

ರಾಜ್ಯ ಘಟಕದ ಉಪಾಧ್ಯಕ್ಷ ರಾಜು ತಳವಾರ ಮಾತನಾಡಿ, ‘ಈ ಬಾರಿ ನಡೆದ ಲೋಕಸಭಾ ಚುನಾವಣೆಯ ಮತದಾನದ ಸಂದರ್ಭದಲ್ಲಿ ಇವಿಎಂ ಯಂತ್ರಗಳಲ್ಲಿ ದೋಷ ಕಂಡು ಬಂದಿದೆ. ಅಲ್ಲದೇ ದೇಶದಾದ್ಯಂತ ಅನೇಕ ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಗಳಿಗಿಂತ ಎಣಿಕೆಯಾದ ಮತಗಳ ಸಂಖ್ಯೆ ಹೆಚ್ಚು ಕಂಡುಬಂದಿದೆ. ಇವಿಎಂಗಳನ್ನು ದುರುಪಯೋಗ ಪಡಿಸಿಕೊಂಡಿರುವ ಘಟನೆಗಳು ನಡೆದಿವೆ’ ಎಂದು ಆರೋಪಿಸಿದರು.

‘ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಮುಂದಿನ ಎಲ್ಲ ಚುನಾವಣೆಗಳಲ್ಲಿ ಇವಿಎಂ ಬಳಕೆಯನ್ನು ನಿಲ್ಲಿಸಬೇಕು. ಬ್ಯಾಲೆಟ್‌ ಪೇಪರ್‌ ಮೂಲಕವೇ ಚುನಾವಣೆ ನಡೆಸಬೇಕು’ ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ADVERTISEMENT

ಜಿಲ್ಲಾ ಘಟಕದ ಅಧ್ಯಕ್ಷ ರಾಹುಲ್ ವರಾಳೆ, ನಾಮದೇವ ಕಾಂಬಳೆ, ಸಂಗೀತಾ ಕಾಂಬಳೆ, ಸಿದ್ದು ಕಾಂಬಳೆ, ಅಕ್ಕಪ್ಪ ಕಾಂಬಳೆ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.