ADVERTISEMENT

ಬೆಳಗಾವಿ: ‘ಬುಡಾ’ ಆಸ್ತಿಗಳ ಸಮೀಕ್ಷೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2021, 11:36 IST
Last Updated 2 ಆಗಸ್ಟ್ 2021, 11:36 IST
ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾದ ಅಧ್ಯಕ್ಷ ಘೂಳಪ್ಪ ಹೊಸಮನಿ ಅಧಿಕಾರಿಗಳೊಂದಿಗೆ ವಿವಿಧ ಬಡಾವಣೆಗಳಿಗೆ ಸೋಮವಾರ ಭೇಟಿ ನೀಡಿದರು
ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾದ ಅಧ್ಯಕ್ಷ ಘೂಳಪ್ಪ ಹೊಸಮನಿ ಅಧಿಕಾರಿಗಳೊಂದಿಗೆ ವಿವಿಧ ಬಡಾವಣೆಗಳಿಗೆ ಸೋಮವಾರ ಭೇಟಿ ನೀಡಿದರು   

ಬೆಳಗಾವಿ: ‘ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ(ಬುಡಾ)ಕ್ಕೆ ಸಂಬಂಧಿಸಿದ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಗಳಿವೆ. ಅವುಗಳ ಸಮೀಕ್ಷೆ ನಡೆಸಿ ವಶಕ್ಕೆ ಪಡೆದುಕೊಳ್ಳಬೇಕು’ ಎಂದು ಅಧ್ಯಕ್ಷ ಘೂಳಪ್ಪ ಹೊಸಮನಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ವಿವಿಧ ಬಡಾವಣೆಗಳಿಗೆ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸೋಮವಾರ ಪರಿಶೀಲನೆ ನಡೆಸಿದರು.

‘ಎಚ್‌.ಡಿ. ಕುಮಾರಸ್ವಾಮಿ ಬಡಾವಣೆ, ಹನುಮಾನ್ ನಗರ, ಲಕ್ಷ್ಮಿ ಟೇಕಡಿ, ಕುವೆಂಪು ನಗರ, ಕಣಬರ್ಗಿ ಸೇರಿದಂತೆ ವಿವಿಧ ಕಡೆಗಳಲ್ಲಿ ಪ್ರಾಧಿಕಾರದ ಜಾಗಗಳಿವೆ. ಆದರೆ, ಅಧಿಕಾರಿಗಳಿಗೆ ಅವುಗಳ ಬಗ್ಗೆ ಮಾಹಿತಿ ಇಲ್ಲ. ಅಂಥವುಗಳನ್ನು ತಕ್ಷಣ ಪತ್ತೆ ಹಚ್ಚಬೇಕು. ಎಕರೆಗಟ್ಟಲೆ ಲಭ್ಯವಿರುವ ಜಾಗಗಳ ಸಮೀಕ್ಷೆ ನಡೆಸಬೇಕು. ಪ್ರಾಧಿಕಾರದ ಆಸ್ತಿ ಯಾರದೋ ಪಾಲಾಗಲು ಅವಕಾಶ ಕೊಡಬಾರದು. ಅಧಿಕಾರಿಗಳು ತಕ್ಷಣ ಅವುಗಳ ಪಟ್ಟಿ ತಯಾರಿಸಿ ಕಾರ್ಯಪ್ರವೃತ್ತರಾಗಬೇಕು’ ಎಂದು ತಾಕೀತು ಮಾಡಿದರು.

ADVERTISEMENT

‘ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಆದಷ್ಟು ಬೇಗ ಇತ್ಯರ್ಥಪಡಿಸಬೇಕು. ಯಾರಿಗೆ ಜಾಗ ಸಿಕ್ಕಿಲ್ಲವೋ ಅವರಿಗೆ ಆದಷ್ಟು ಬೇಗ ಜಾಗ ನೀಡಲು ಸ್ಪಂದಿಸಬೇಕು. ಜನರಿಗೆ ಅಗತ್ಯವಾದ ನಿವೇಶನ ನೀಡಲು ಮುಂದಾಗಬೇಕು’ ಎಂದು ತಿಳಿಸಿದರು.

ಆಯುಕ್ತ ಜಿ.ಟಿ. ದಿನೇಶ್‌ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.