ಸುವರ್ಣ ವಿಧಾನಸೌಧ, ಬೆಳಗಾವಿ: ‘ಜನರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಹಾಗೂ ಮಧುಮೇಹ ನಿಯಂತ್ರಿಸಲು ಸಿರಿಧಾನ್ಯದ ಬಳಕೆ ಸಹಕಾರಿ. ಈ ದೃಷ್ಟಿಯಿಂದ ಹೆಚ್ಚಿನ ರೈತರು ಸಿರಿಧಾನ್ಯಗಳನ್ನು ಬೆಳೆಯಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ‘ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ’ದ ಪೂರ್ವಭಾವಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸಿರಿಧಾನ ಉತ್ಪಾದನೆಯಲ್ಲಿ ನಮ್ಮ ರಾಜ್ಯ ಮೂರನೇ ಸ್ಥಾನದಲ್ಲಿದೆ. 18.38 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 22.16 ಲಕ್ಷ ಟನ್ ಸಿರಿಧಾನ್ಯ ಬೆಳೆಯಲಾಗುತ್ತಿದೆ’ ಎಂದರು.
‘ಈಗ ದೇಶ– ವಿದೇಶಗಳಲ್ಲಿ ಸಿರಿಧಾನ್ಯಗಳ ಬೇಡಿಕೆ ಹೆಚ್ಚುತ್ತಿದೆ. ವಿಶ್ವದಲ್ಲಿ 903.61 ಲಕ್ಷ ಟನ್, ಭಾರತದಲ್ಲಿ ಇದರ ಶೇ 31.50ರಷ್ಟು ಸಿರಿಧಾನ್ಯ ಬೆಳೆಯಲಾಗುತ್ತಿದೆ. ವಿಶ್ವದಲ್ಲಿ ಹೆಚ್ಚು ಸಿರಿಧಾನ್ಯ ಬೆಳೆಯುವ ದೇಶ ನಮ್ಮದು’ ಎಂದರು.
‘ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ 2025ರ ಜನವರಿ 23 ರಿಂದ 25ರವರೆಗೆ ಅಂತರರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ ಹಮ್ಮಿಕೊಳ್ಳಲಾಗಿದೆ. ಈ ಧಾನ್ಯಗಳ ಮಹತ್ವವನ್ನು ತಿಳಿಸಿ, ಬೆಳೆಯಲು ಪ್ರೋತ್ಸಾಹಿಸಲಾಗುವುದು’ ಎಂದರು.
Highlights - ರಾಜ್ಯದಲ್ಲಿ ಬೆಳೆಯುವ ಸಿರಿಧಾನ್ಯದ ಪ್ರಮಾಣ 22.16 ಲಕ್ಷ ಟನ್ ವಿಶ್ವದ ಶೇ 31.50ರಷ್ಟು ಸಿರಿಧಾನ್ಯ ಬೆಳೆಯುವ ಭಾರತ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ ಕರ್ನಾಟಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.