ADVERTISEMENT

ಐಪಿಎಲ್‌ ಬೆಟ್ಟಿಂಗ್‌; ಆರೋಪಿಯ ಸೆರೆ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2019, 16:43 IST
Last Updated 27 ಏಪ್ರಿಲ್ 2019, 16:43 IST

ಬೆಳಗಾವಿ: ಇಲ್ಲಿನ 3ನೇ ರೈಲ್ವೆ ಗೇಟ್‌ ಬಳಿ ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಆರೋಪದ ಮೇಲೆ ಖಾನಾಪುರದ ಸಲ್ಮಾನ ನಿಯಾಜ ಬಡೆಗಾರ ಎಂಬಾತನನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ.

ಬಂಧಿತನಿಂದ ₹ 19,600 ನಗದು, 1 ಮೊಬೈಲ್‌ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮತ್ತೊಬ್ಬ ಆರೋಪಿ ಬೆಟ್ಟಿಂಗ್ ಬುಕ್ಕಿ, ಮಜಗಾವಿಯ ಪವನ ಕಾಕತಕರ ತಪ್ಪಿಸಿಕೊಂಡಿದ್ದಾರೆ. ಈ ಬಗ್ಗೆ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಮುಂಬೈ ಇಂಡಿಯನ್ಸ್‌ ಪಂದ್ಯದ ವೇಳೆ ಆರೋಪಿಯು ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಎಂದು ಹೇಳಲಾಗುತ್ತಿದೆ. ಎಸಿಪಿ (ಅಪರಾಧ) ಮಹಾಂತೇಶ್ವರ ಜಿದ್ದಿ ನೇತೃತ್ವದಲ್ಲಿ ಉದ್ಯಮಬಾಗ ಪೊಲೀಸ್‌ ಇನ್‌ಸ್ಪೆಕ್ಟರ್‌ ಎಸ್.ಸಿ ಪಾಟೀಲ ಹಾಗೂ ಸಿಬ್ಬಂದಿ ಅನಿಲ ಪಾಟೀಲ, ಐ.ಎಸ್ ಪಾಟೀಲ, ಶಿವಲಿಂಗ ಪಾಟೀಲ ಅವರನ್ನೊಳಗೊಂಡ ತಂಡ ದಾಳಿ ಮಾಡಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.