ADVERTISEMENT

ಮನೆ ಸಮೀಕ್ಷೆಯಲ್ಲಿ ಅಕ್ರಮ ತಡೆಯಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2019, 16:48 IST
Last Updated 14 ಅಕ್ಟೋಬರ್ 2019, 16:48 IST
ಅಥಣಿಯಲ್ಲಿ ಸಂತ್ರಸ್ತರ ಮನೆಗಳ ಸಮೀಕ್ಷೆಯಲ್ಲಿ ನಡೆದಿರುವ ಅವ್ಯವಹಾರ ತಡೆಯುವಂತೆ ಆಗ್ರಹಿಸಿ ಭಾರತೀಯ ಕಿಸಾನ್‌ ಸಂಘದ ಅಧ್ಯಕ್ಷ ಅಶೋಕ ದಾನಗೌಡರ ನೇತೃತ್ವದಲ್ಲಿ ರೈತರು ತಾಲ್ಲೂಕು ಪಂಚಾಯ್ತಿ ಇಒ ರವಿ ಬಂಗಾರೆಪ್ಪನವರ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು
ಅಥಣಿಯಲ್ಲಿ ಸಂತ್ರಸ್ತರ ಮನೆಗಳ ಸಮೀಕ್ಷೆಯಲ್ಲಿ ನಡೆದಿರುವ ಅವ್ಯವಹಾರ ತಡೆಯುವಂತೆ ಆಗ್ರಹಿಸಿ ಭಾರತೀಯ ಕಿಸಾನ್‌ ಸಂಘದ ಅಧ್ಯಕ್ಷ ಅಶೋಕ ದಾನಗೌಡರ ನೇತೃತ್ವದಲ್ಲಿ ರೈತರು ತಾಲ್ಲೂಕು ಪಂಚಾಯ್ತಿ ಇಒ ರವಿ ಬಂಗಾರೆಪ್ಪನವರ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು   

ಅಥಣಿ: ‘ಪ್ರವಾಹ ಸಂಸತ್ರಸ್ತರ ಮನೆಗಳನ್ನು ಸಮೀಕ್ಷೆ ಮಾಡುವಲ್ಲಿ ಅಕ್ರಮ ಮತ್ತು ಅವ್ಯವಹಾರ ನಡೆದಿದ್ದು, ತಕ್ಷಣವೇ ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಭಾರತೀಯ ಕಿಸಾನ್‌ ಸಂಘದ ಅಧ್ಯಕ್ಷ ಅಶೋಕ ದಾನಗೌಡರ ನೇತೃತ್ವದಲ್ಲಿ ರೈತರು ತಾಲ್ಲೂಕು ಪಂಚಾಯ್ತಿ ಇಒ ರವಿ ಬಂಗಾರೆಪ್ಪನವರ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

‘ತಾಲ್ಲೂಕಿನ ಶಿರಹಟ್ಟಿ ಗ್ರಾಮದ ಮನೆಗಳು ಮತ್ತು ತೋಟದ ನಿವೇಶನಗಳು ಪ್ರವಾಹ ಬಂದಾಗ ಸಂಪೂರ್ಣವಾಗಿ ಮುಳುಗಡೆಯಾಗಿವೆ. ಪಿಡಿಒ ಹಾಗೂ ಕಂಪ್ಯೂಟರ್‌ ಆಪರೇಟರ್ ಇತರರ ಹಾಳಾದ ಶೆಡ್‌ ಹಾಗೂ ಮನೆಗಳನ್ನು ಸರ್ವೇ ಮಾಡದೇ, ಫಲಾನುಭವಿಗಳ ಹೆಸರು ನೋಂದಾಯಿಸದೇ ಅಕ್ರಮ ಮಾಡುತ್ತಿದ್ದಾರೆ. ಇದರಿಂದ ನೈಜ ಫಲಾನುಭವಿಗಳಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ, ಹಿರಿಯ ಅಧಿಕಾರಿಗಳು ಇತ್ತ ಗಮನಹರಿಸಬೇಕು’ ಎಂದು ಒತ್ತಾಯಿಸಿದರು.

ಭರಮಾ ನಾಯಿಕ, ಎ.ಸಿ. ಪಾಟೀಲ, ರಾಜು ನಂದೇಶ್ವರ, ಕಲ್ಲಪ್ಪ ತೀರ್ಥ, ಮಹಾಲಿಂಗಯ್ಯ ಮಠದ, ಭರತೇಶ ದಾನಗೌಡರ, ಅಭುನಂದನ ಯಲಿಗೌಡ, ಬಾಳು ನಿಶ್ಪತ್ತಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.