ಹಂದಿಗುಂದ ಸಮೀಪದ ಮರಾಕುಡಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಮಹೇಂದ್ರ ತಮ್ಮಣ್ಣವರ ಈಚೆಗೆ ಚಾಲನೆ ನೀಡಿದರು
ಹಂದಿಗುಂದ: ‘ಕುಡಚಿ ಮತಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಅನೇಕ ಸವಾಲುಗಳನ್ನು ಎದುರಿಸಿ ಕ್ಷೇತ್ರದ ಅಭಿವೃದ್ಧಿಗೆ ಗಮನ ಹರಿಸಲಾಗುವುದು. ನೀರಾವರಿ ಹಾಗೂ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಿದ್ದೇನೆ’ ಎಂದು ಶಾಸಕ ಮಹೇಂದ್ರ ತಮ್ಮಣ್ಣವರ ಹೇಳಿದರು.
ಸಮೀಪದ ಮರಾಕುಡಿಯಲ್ಲಿ ರೈತ ಸಭಾಭವನ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿ ಮತ್ತು ಲಕ್ಷ್ಮೀ ದೇವಸ್ಥಾನದ ಮುಂದೆ ಸಮುದಾಯ ಭವನ ನಿರ್ಮಾಣಕ್ಕೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಗ್ರಾಮ ಪಂಚಾಯಿತಿ ಸದಸ್ಯ ತಮ್ಮಣ್ಣ ಪಾಟೀಲ, ಕೆಂಪಣ್ಣ ಬಳಗಾರ, ನಾಡಗೌಡ ಪಾಟೀಲ, ಮಲ್ಲಪ್ಪ ಅಂಗಡಿ, ಕುಡಚಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ ಹಾಲ್ಗುಣಿ, ಪಿಡಿಒ ಬರಮು ನಾಗನೂರ, ನೀರಾವರಿ ಇಲಾಖೆಯ ಎಂಜಿನಿಯರ್ ಮಹಾಂತೇಶ ಯಡಪ್ಪನವರ, ಅರ್ಜುನ ಪಾಟೀಲ, ವರ್ಧಮಾನ ಶಿರಹಟ್ಟಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.