ಬೆಳಗಾವಿ: ತ್ಯಾಜ್ಯ ನೀರು ಸಂಸ್ಕರಣಾ ಘಟಕದ(ಎಸ್‌ಟಿಪಿ) ಸ್ಥಾಪನೆಗೆ ಸಂಬಂಧಿಸಿ ಸಂಸದ ಜಗದೀಶ ಶೆಟ್ಟರ್ ಅವರು, ಇಲ್ಲಿ ಬುಧವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಬೆಳಗಾವಿ ತಾಲ್ಲೂಕಿನಲ್ಲಿ ಎಸ್‌ಟಿಪಿ ಸ್ಥಾಪನೆಗಾಗಿ ಈವರೆಗೆ ಕೈಕೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಎಸ್‌ಟಿಪಿ ನಿರ್ಮಾಣಕ್ಕಾಗಿ ಭೂಸ್ವಾಧೀನ ಪಡಿಸಿಕೊಂಡ ಜಮೀನುಗಳಿಗೆ ಹೆಚ್ಚಿನ ಪರಿಹಾರ ಮಂಜೂರು ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ ಕುರಿತಾಗಿಯೂ ಚರ್ಚಿಸಿ, ‘ಈ ವಿಷಯವಾಗಿ ಸರ್ಕಾರದ ಮಟ್ಟದಲ್ಲಿ ಹಿರಿಯ ಅಧಿಕಾರಿಗಳು ಮತ್ತು ಬೆಳಗಾವಿ ಜಿಲ್ಲಾಧಿಕಾರಿ ಜತೆ ಸಮಾಲೋಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.
ಸ್ಮಾರ್ಟ್‌ಸಿಟಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳನ್ನು ಮಹಾನಗರ ಪಾಲಿಕೆಗೆ ಹಸ್ತಾಂತರಿಸುವ ಕುರಿತು ಮಾಹಿತಿ ಪಡೆದುಕೊಂಡರು. ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದ ಯೋಜನೆ ಕುರಿತು ಅಧಿಕಾರಿಗಳು ವಿವರಿಸಿದರು.
ಮಹಾನಗರ ಪಾಲಿಕೆ ಆಯುಕ್ತೆ ಬಿ.ಶುಭ, ಸ್ಮಾರ್ಟ್‌ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕಿ ಸಯೀದಾ ಆಫ್ರೀನ್‌ಭಾನು ಬಳ್ಳಾರಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ ಶಿರೂರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.