ಜಗದೀಶ ಶೆಟ್ಟರ್
ಬೆಳಗಾವಿ: ‘ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆದ ಹಗರಣದ ಆರೋಪಿ ಬಿ.ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ಕೊಡುವ ಪ್ರಯತ್ನ ನಡೆದಿದ್ದು, ಇದರಿಂದ ರಾಜ್ಯ ಕಾಂಗ್ರೆಸ್ ಸರ್ಕಾರವು ತನ್ನ ಹಗರಣಗಳನ್ನು ಮುಚ್ಚಿಹಾಕಲು ಮುಂದಾಗಿದೆ’ ಎಂದು ಸಂಸದ ಜಗದೀಶ ಶೆಟ್ಟರ್ ದೂರಿದರು.
‘ಈ ಹಿಂದೆ ಸಚಿವರು ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಬಿ.ನಾಗೇಂದ್ರ, ಹಗರಣದಲ್ಲಿ ಬಂಧಿತರಾಗಿ, ಜಾಮೀನು ಪಡೆದಿದ್ದಾರೆ. ತನಿಖೆ ನಡೆದಿದೆ. ಈ ಮಧ್ಯೆ ಅವರನ್ನು ಮತ್ತೆ ಸಚಿವರನ್ನಾಗಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ’ ಎಂದು ಅವರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.