ADVERTISEMENT

‘ಕೆರೆಗಳ ಅಭಿವೃದ್ಧಿ ಶ್ರೇಷ್ಠ ಕೆಲಸ’

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2024, 16:17 IST
Last Updated 8 ಅಕ್ಟೋಬರ್ 2024, 16:17 IST
ಬೆಳಗಾವಿ ತಾಲ್ಲೂಕಿನ ಶಿಂದೊಳ್ಳಿ ಗ್ರಾಮದ ಕೆರೆಗೆ ಸಂಸದ ಜಗದೀಶ ಶೆಟ್ಟರ್‌ ಮಂಗಳವಾರ ಬಾಗಿ ಅರ್ಪಿಸಿದರು
ಬೆಳಗಾವಿ ತಾಲ್ಲೂಕಿನ ಶಿಂದೊಳ್ಳಿ ಗ್ರಾಮದ ಕೆರೆಗೆ ಸಂಸದ ಜಗದೀಶ ಶೆಟ್ಟರ್‌ ಮಂಗಳವಾರ ಬಾಗಿ ಅರ್ಪಿಸಿದರು   

ಬೆಳಗಾವಿ: ‘ಸಾಮಾಜಿಕ ಮತ್ತು ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಕೊಡುವ ಮೂಲಕ ಧರ್ಮಸ್ಥಳದ ಧರ್ಮಾಧ್ಯಕ್ಷರಾದ ವೀರೇಂದ್ರ ಹೆಗ್ಗಡೆ ಅವರು ಮಾದರಿ ಕೆಲಸ ಮಾಡುತ್ತಿದ್ದಾರೆ’ ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ನಿಲಜಿ ಗ್ರಾಮ ಪಂಚಾಯಿತಿ, ಶಿಂದೊಳ್ಳಿ ಕೆರೆ ಅಭಿವೃದ್ಧಿ ಸಮಿತಿ ಆಶ್ರಯದಲ್ಲಿ ಪುನಃಶ್ಚೇತನಗೊಳಿಸಿದ ಶಿಂದೊಳ್ಳಿ ಸರ್ಕಾರಿ ಕೆರೆ ಹಸ್ತಾಂತರ ಮತ್ತು ಬಾಗಿನ ಅರ್ಪಣೆ ಮಾಡಿ ಮಾತನಾಡಿದರು.

‘ಧರ್ಮಸ್ಥಳ ಯೋಜನೆಯವರು ಜಿಲ್ಲೆಯಲ್ಲಿ ಸುಮಾರು 48 ಕೆರೆಗಳನ್ನು ಹೂಳೆತ್ತಿದ್ದಾರೆ. ಶಿಂದೊಳ್ಳಿ ಸರ್ಕಾರಿ ಕೆರೆಗೆ ₹3.84 ಲಕ್ಷ ವಿನಿಯೋಗಿಸಿದ್ದಾರೆ. ಎಲ್ಲರೂ ಒಗ್ಗಟ್ಟಾಗಿ ಕೆರೆ ಮತ್ತು ಪರಿಸರವನ್ನು ಸಂರಕ್ಷಣೆ ಮಾಡಬೇಕು’ ಎಂದರು.

ADVERTISEMENT

ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ ಶಹಪುರಕರ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಬಾಬಗೌಡ ಪಾಟೀಲ, ಪಿರಾಜಿ ಅನಗೋಳಕರ, ಕೆರೆ ಸಮಿತಿ ಅಧ್ಯಕ್ಷ ಬಾಳರಾಮ ಅನಗೋಳಕರ, ಜಿಲ್ಲಾ ನಿರ್ದೇಶಕ ಸತೀಶ ನಾಯ್ಕ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ಪಿ. ಹೆಡಗೆ, ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಬಿ.ಡಿ. ಕಡೇಮನಿ, ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಬಸವರಾಜ ಸೊಪ್ಪಿಮಠ, ಯೋಜನಾಧಿಕಾರಿ ಸುಭಾಷ ಪಿ.ಸಿ., ಧಾರವಾಡ ಪ್ರಾದೇಶಿಕ ಕಚೇರಿಯ ಎಂಜಿನಿಯರ್‌ ನಿಂಗರಾಜ ಮಾಳವಾಡ, ಒಕ್ಕೂಟ ಅಧ್ಯಕ್ಷೆ ಶಿವಲೀಲಾ ಚರಂತಿಮಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.